ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಹಳ್ಳ, ಕೊಳ್ಳ ದಾಟುವ ಪ್ರಯತ್ನ ಬೇಡ: ಡಿಸಿ

ಧಾರವಾಡ: ಅತಿವೃಷ್ಠಿಯಿಂದ ಎದುರಾಗುವ ಸಮಸ್ಯೆಗಳಿಗೆ ಜಿಲ್ಲೆಯ ಎಲ್ಲಾ ಇಲಾಖೆಗಳು ತಕ್ಷಣ ಸ್ಪಂದನೆ ನೀಡಬೇಕು. ಅಂಗನವಾಡಿ ಹಾಗೂ ಶಾಲಾ ಕಟ್ಟಡಗಳ ಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ವರದಿ ನೀಡಬೇಕು. ಮನೆಗಳ ಹಾನಿ ಕುರಿತು ಈಗಿನಿಂದಲೇ ನಿಖರ ದಾಖಲೆಗಳ ಸಂಗ್ರಹ ಕಾರ್ಯ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಆನ್‌ಲೈನ್ ಮೂಲಕ‌ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಜನ ಜೀವನದ ಮೇಲೆ ಪರಿಣಾಮ ಉಂಟಾಗಿದೆ. ಅತಿವೃಷ್ಠಿಯಿಂದ ಸಂಕಷ್ಟಕ್ಕೀಡಾಗಿರುವ ಜನತೆಗೆ ಜಿಲ್ಲಾಡಳಿತ ತಕ್ಷಣ ಸ್ಪಂದನೆ ನೀಡಬೇಕು, ಸಂಬಂಧಿಸಿದ ಎಲ್ಲಾ ಇಲಾಖೆಗಳು 24X7 ನಿರಂತರವಾಗಿ ಕಾರ್ಯ ನಿರ್ವಹಿಸಬೇಕು. ಜೀವರಕ್ಷಕ ಜಾಕೆಟ್, ಟಾರ್ಚ್, ಬೋಟ್ ಮತ್ತಿತರ ತುರ್ತು ಪರಿಸ್ಥಿತಿ ನಿರ್ವಹಣಾ ಸಾಧನಗಳೊಂದಿಗೆ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆ ಸನ್ನದ್ಧವಾಗಿರಬೇಕು. ಜಿಲ್ಲೆಯ ಅಂಗನವಾಡಿ ಹಾಗೂ ಶಾಲಾ ಕಟ್ಟಡಗಳ ಸ್ಥಿತಿಗತಿ ಕುರಿತು ಖುದ್ದು ಪರಿಶೀಲನೆ ಮಾಡಿ ಆಯಾ ಇಲಾಖೆಗಳ ಅಧಿಕಾರಿಗಳು ವರದಿ ನೀಡಬೇಕು. ಹಳ್ಳ, ಕೊಳ್ಳಗಳು ತುಂಬಿ ಹರಿಯುವಾಗ ಅವುಗಳನ್ನು ದಾಟುವ ಪ್ರಯತ್ನಗಳಿಗೆ ಕೈ ಹಾಕದಂತೆ ಜನರಲ್ಲಿ ಎಚ್ಚರಿಕೆ ಮೂಡಿಸಲು ಗ್ರಾಮ ಪಂಚಾಯತಿಗಳ ಮೂಲಕ ಡಂಗೂರ ಸಾರಿಸಬೇಕು. ಕಚ್ಚಾ ಮನೆಗಳಲ್ಲಿ ಇರುವವರಿಗೆ ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಕಲ್ಪಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಜನತೆಯು ತುರ್ತು ಸಂದರ್ಭಗಳಲ್ಲಿ ಜಿಲ್ಲಾಡಳಿತ, ಪೊಲೀಸ್ ಹಾಗೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಹಾಯವಾಣಿ ಸಂಖ್ಯೆಗಳಿಗೆ ಸಂಪರ್ಕಿಸಬೇಕು. ದೂರು ಸ್ವೀಕರಿಸಿದ ಕೂಡಲೇ ಸಂಬಂಧಿಸಿದ ಇಲಾಖೆಗಳು ತ್ವರಿತ ಸ್ಪಂದನೆ ನೀಡಬೇಕು ಎಂದು ಸೂಚಿಸಿದರು.

ಹುಬ್ಬಳ್ಳಿ, ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ಮಾತನಾಡಿ, ಹಿಂದಿನ ವರ್ಷಗಳ ಅನುಭವದ ಆಧಾರದಲ್ಲಿ ಅತಿವೃಷ್ಠಿ ನಿರ್ವಹಣೆಗೆ ಅಣಿಯಾಗಬೇಕು ಅವಳಿನಗರದ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ತೊಂದರೆ ಎದುರಾದರೆ ಪೊಲೀಸ್ ಸಹಾಯವಾಣಿ 112 ಸಂಪರ್ಕಿಸಿದರೆ, 15 ರಿಂದ 20 ನಿಮಿಷಗಳ ಅವಧಿಯಲ್ಲಿ ನೆರವಿಗೆ ಧಾವಿಸಲಾಗುತ್ತದೆ ಎಂದರು.

Edited By : Nagaraj Tulugeri
Kshetra Samachara

Kshetra Samachara

20/05/2022 07:22 pm

Cinque Terre

17.59 K

Cinque Terre

6

ಸಂಬಂಧಿತ ಸುದ್ದಿ