ಹುಬ್ಬಳ್ಳಿ: ಕಳೆದ ಎರಡು ದಿನಗಳ ಹಿಂದೆಯಷ್ಟೆ ಸುರಿದ ಧಾರಾಕಾರ ಮಳೆಗೆ ಹುಬ್ಬಳ್ಳಿಯ ಜನರು ಅಕ್ಷರಶಃ ಸಂಕಷ್ಟಕ್ಕೆ ಸಿಲುಕಿದ್ದು, ಅಪಾರ ಪ್ರಮಾಣದಲ್ಲಿ ಸಾರ್ವಜನಿಕ ಆಸ್ತಿ ಹಾನಿಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಳೆಯ ಹಾವಳಿಗೆ ಹೆಚ್ಚಾಗಿ ಹಾನಿಯಾಗಿದ್ದ ಗಣೇಶನಗರ, ಟಿಪ್ಪು ನಗರ ಹಾಗೂ ಹಳೇ ಹುಬ್ಬಳ್ಳಿ ಆನಂದನಗರದ ನಾಲಾಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಿ ಅಹವಾಲು ಸ್ವೀಕರಿಸಿದ್ದು, ಕೂಡಲೇ ಪರಿಹಾರ ಒದಗಿಸುವ ಭರವಸೆ ನೀಡಿದ್ದಾರೆ.
ಇನ್ನೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರು ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದು, ಸಮಸ್ಯೆಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವರಿಕೆ ಮಾಡಿದ್ದಾರೆ. ಸ್ಥಳೀಯ ಸಮಸ್ಯೆಗಳನ್ನು ಗಮನಿಸಿದ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಕೂಡಲೇ ಶಾಶ್ವತ ಪರಿಹಾರ ಒದಗಿಸುವ ಕುರಿತು ಚಿಂತನೆ ನಡೆಸಲಾಗುತ್ತದೆ ಎಂದು ಅಧಿಕಾರಿಗಳ ಸಮ್ಮುಖದಲ್ಲಿ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
Kshetra Samachara
21/05/2022 10:17 pm