ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಮೇಯರ್, ಉಪಮೇಯರ್ ಚುನಾವಣೆ ಸಮಯದಲ್ಲಿ ಬದಲಾವಣೆ

ಧಾರವಾಡ: ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆಯ 21ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಸ್ಥಾನಗಳಿಗೆ ಮೇ.28 ರಂದು ಚುನಾವಣೆ ಈಗಾಗಲೇ ಘೋಷಣೆಯಾಗಿದ್ದು, ವೇಳಾಪಟ್ಟಿಯ ಸಮಯದಲ್ಲಿ ಪರಿಷ್ಕರಣೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿಗಳೂ ಆಗಿರುವ ಬೆಳಗಾವಿ ವಿಭಾಗ ಪ್ರಾದೇಶಿಕ ಆಯುಕ್ತ ಆಮ್ಲನ್ ಆದಿತ್ಯ ಬಿಸ್ವಾಸ್ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಕರ್ನಾಟಕ ವಿಧಾನಪರಿಷತ್ತಿನ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಮೇಯರ್ ಸ್ಥಾನವು ಸಾಮಾನ್ಯ ವರ್ಗ, ಉಪಮೇಯರ್ ಸ್ಥಾನವು ಸಾಮಾನ್ಯ ಮಹಿಳಾ ವರ್ಗಕ್ಕೆ ಮೀಸಲಿಡಲಾಗಿದೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಮೇ.28 ರಂದು ಮಧ್ಯಾಹ್ನ 1.30 ಕ್ಕೆ ಚುನಾವಣೆ ನಡೆಯಲಿದೆ. ಅಂದು ಬೆಳಿಗ್ಗೆ 9.30 ಗಂಟೆಯಿಂದ 11 ಗಂಟೆಯವರೆಗೆ ನಾಮಪತ್ರಗಳನ್ನು ಸ್ವೀಕರಿಸಲಾಗುವುದು. ಮಧ್ಯಾಹ್ನ 1 ಗಂಟೆಗೆ ಸಭೆ ಪ್ರಾರಂಭವಾಗುವುದು. ನಾಮಪತ್ರಗಳ ಪರಿಶೀಲನೆ ನಂತರ ಉಮೇದುವಾರರ ಘೋಷಣೆ ನಾಮಪತ್ರ ಹಿಂಪಡೆಯಲು ಅವಕಾಶ ಕಲ್ಪಿಸಲಾಗುವುದು. ಅಗತ್ಯವಿದ್ದರೆ ಕೈ ಎತ್ತುವ ಮೂಲಕ ಮತದಾನ ನಡೆಸಿ, ನಂತರ ಮತಗಳ ಎಣಿಕೆ, ಫಲಿತಾಂಶ ಘೋಷಣೆ ಮಾಡಲಾಗುವುದು ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

23/05/2022 01:40 pm

Cinque Terre

19.33 K

Cinque Terre

0

ಸಂಬಂಧಿತ ಸುದ್ದಿ