ಧಾರವಾಡ: ಕಾಂಗ್ರೆಸ್‌ನ ಕೆಲ ನಾಯಕರು ಬಿಜೆಪಿಯ ಕದ ತಟ್ಟುತ್ತಿದ್ದಾರೆ. ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವುದರ ಬಗ್ಗೆ ವಿಚಾರ ಮಾಡಲಾಗುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೊಸ ಬಾಂಬ್ ಸಿಡಿಸಿದರು.
ಧಾರವಾಡದಲ್ಲಿ ಮಾತನಾಡಿದ ಅವರು, ಅನೇಕರು ಬಿಜೆಪಿ ಸೇರ್ಪಡೆಯಾಗಲು ಉತ್ಸುಕರಾಗಿದ್ದಾರೆ. ಅವರ ಬಗ್ಗೆ ವಿಚಾರ ಮಾಡಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.
ಡಿಕೆಶಿಗೆ ಇಡಿ ನೋಟಿಸ್ ನೀಡಿದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇಡಿ ತನ್ನ ಕೆಲಸ ಮಾಡುತ್ತಿದೆ. ಈಗಾಗಲೇ ಎಫ್‌ಐಆರ್ ಆಗಿ ತನಿಖೆ ನಡೆಯುತ್ತಿದೆ ಎಂದರು.
ಮಂಗಳೂರಿನಲ್ಲಿ ವಿದ್ಯಾರ್ಥಿನಿಯರು ಮತ್ತೆ ಹಿಜಾಬ್ ಹಾಕಿಕೊಂಡು ಬಂದಿದ್ದು, ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ. ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸಬೇಕು. ನ್ಯಾಯಾಲಯದ ಆದೇಶ ಇದ್ದರೂ ಯಾಕೆ ಹೀಗೆ ಮಾಡುತ್ತಿದ್ದಾರೋ ಗೊತ್ತಿಲ್ಲ. ದೇಶದ ಕಾನೂನನ್ನು ವ್ಯತಿರಿಕ್ತವಾಗಿ ಪಾಲನೆ ಮಾಡಿದರೆ ಕಠಿಣ ಕ್ರಮ ಆಗುತ್ತದೆ. ಕಾಂಗ್ರೆಸ್‌ನ ಕುಮ್ಮಕ್ಕಿನಿಂದ ಈ ರೀತಿ ಹಿಜಾಬ್ ಗಲಾಟೆ ಏಳುತ್ತಿದೆ ಎಂದರು.
ಮೇಯರ್, ಉಪಮೇಯರ್ ಆಕಾಂಕ್ಷಿಗಳು ಬಂದು ತಮ್ಮ ಅಹವಾಲುಗಳನ್ನು ಸಲ್ಲಿಸಿದ್ದಾರೆ. ಅವರೆಲ್ಲರ ಅಹವಾಲುಗಳನ್ನು ಆಲಿಸಿದ್ದೇವೆ. ನಾಳೆ ಈ ಬಗ್ಗೆ ಸಭೆ ಕರೆಯಲಾಗಿದ್ದು, ನಾಳೆ ರಾತ್ರಿವರೆಗೆ ಮೇಯರ್, ಉಪಮೇಯರ್ ಬಗ್ಗೆ ನಾವು ತೀರ್ಮಾನ ಕೈಗೊಳ್ಳುತ್ತೇವೆ ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
26/05/2022 07:00 pm