ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಬಿಜೆಪಿ ಪಾಳೆಯದಲ್ಲಿ ಮಹತ್ವದ ಸಭೆ: ಮೇಯರ್ ಗೌನ್ ಗಾಗಿ ಗೌಪ್ಯ ಸಭೆ!

ಹುಬ್ಬಳ್ಳಿ: ಮಹಾನಗರ ಪಾಲಿಕೆಯಲ್ಲಿ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಬಿಜೆಪಿ ಸಂಘ ನಿಷ್ಠರಿಗೆ ಮೇಯರ್ ಗೌನ್ ತೊಡಿಸಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಇನ್ನೇನೂ ಪಾಲಿಕೆ ಮೇಯರ್, ಉಪಮೇಯರ್ ಆಯ್ಕೆಗೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ ವಲಯದಲ್ಲಿ ಸಾಕಷ್ಟು ಕಸರತ್ತು ಹಾಗೂ ಚರ್ಚೆಗಳು ನಡೆಯುತ್ತಿವೆ.

ಪಾಲಿಕೆಯಲ್ಲಿ 39 ಸದಸ್ಯರನ್ನು ಹೊಂದಿರುವ ಬಿಜೆಪಿಗೆ ಅಧಿಕಾರ ಸುಲಭವಾಗಿ ಒಲಿಯಲಿದೆ. ಮೇಯರ್ ಸ್ಥಾನಕ್ಕೆ ಸಾಮಾನ್ಯ ಮೀಸಲಾತಿ ಹಾಗೂ ಉಪ ಮೇಯರ್ಗೆ ಸಾಮಾನ್ಯ ಮಹಿಳಾ ಮೀಸಲಾತಿ ಇದ್ದು, ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ಮೂಲಗಳ ಪ್ರಕಾರ ಬಿಜೆಪಿ ಮಹಾನಗರ ಜಿಲ್ಲಾ ಅಧ್ಯಕ್ಷರ ಬಳಿ ಈಗಾಗಲೇ 10ಕ್ಕೂ ಹೆಚ್ಚು ಜನರ ಮೇಯರ್- ಉಪ ಮೇಯರ್ ಆಕಾಂಕ್ಷಿಗಳು ಅರ್ಜಿ ನೀಡಿದ್ದಾರೆ. ಆದರೆ, ಈ ಬಾರಿ ಮೇಯರ್ ಪಟ್ಟವನ್ನು ಹುಬ್ಬಳ್ಳಿಗೆ ನೀಡಬೇಕೋ ಅಥವಾ ಧಾರವಾಡಕ್ಕೆ ನೀಡಬೇಕೋ, ಬಿಜೆಪಿ ಸದಸ್ಯರ ಹಾಗೂ ಪ್ರಮುಖರ ಸಭೆಯನ್ನು ಎಂಬುದು ಇನ್ನೂ ನಿರ್ಧಾರವಾಗಿಲ್ಲ.

ಧಾರವಾಡದವರು ಪ್ರತ್ಯೇಕ ಮಹಾನಗರ ಪಾಲಿಕೆ ಬೇಡಿಕೆ ಇಟ್ಟಿರುವುದರಿಂದ ಅವರನ್ನು ಸಮಾಧಾನಪಡಿಸಲು ಧಾರವಾಡದ ಸದಸ್ಯರನ್ನು ಮೇಯರ್ ಮಾಡಿದರೂ ಅಚ್ಚರಿ ಇಲ್ಲ. ಹಾಗಾದರೆ ಉಪ ಮೇಯರ್ ಪಟ್ಟ ಹುಬ್ಬಳ್ಳಿಗೆ ಒಲಿಯಲಿದೆ. ಒಂದು ವೇಳೆ, ಹುಬ್ಬಳ್ಳಿಯವರು ಮೇಯರ್ ಆದರೆ,ಧಾರವಾಡದವರಿಗೆ ಉಪ ಮೇಯರ್ ಪಟ್ಟ ಖಚಿತ.

ಹುಬ್ಬಳ್ಳಿಯಲ್ಲಿಂದು ನಡೆಯಲಿರುವ ಸಭೆಯಲ್ಲಿ ಪಾಲಿಕೆಯ ಬಿಜೆಪಿ ಸದಸ್ಯರ ಸಲಹೆ ಪಡೆದುಕೊಂಡು ಮೇಯರ್, ಉಪ ಮೇಯರ್ ಅಭ್ಯರ್ಥಿಗಳನ್ನು ನಿರ್ಧರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಮೇ 28ರಂದು ಮೇಯರ್, ಉಪ ಮೇಯರ್ ಚುನಾವಣೆ ಇದೆ. ಈ ಹಿನ್ನೆಲೆಯಲ್ಲಿ ಪಾಲಿಕೆಯ 27ರಂದು ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿ ಕರೆಯಲಾಗಿದೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಮೇಯರ್, ಉಪಮೇಯರ್ ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ಮಹತ್ವದ ಚರ್ಚೆ ನಡೆಸಲಾಗುತ್ತದೆ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

27/05/2022 10:52 am

Cinque Terre

36.63 K

Cinque Terre

4

ಸಂಬಂಧಿತ ಸುದ್ದಿ