ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪಕ್ಷೇತರರಿಬ್ಬರೂ ಕಮಲ ಪಡೆಗೆ: ಪಾಲಿಕೆ ಮೇಯರ್ ಗೌನ್‌ಗಾಗಿ ರಾತ್ರೋರಾತ್ರಿ ಕಾರ್ಯಾಚರಣೆ...!

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ನಡೆದು ಒಂಬತ್ತು ತಿಂಗಳ ಬಳಿಕ ಮೇಯರ್ ಉಪಮೇಯರ್ ಚುನಾವಣೆಗೆ ಕಾಲ ಕೂಡಿಬಂದಿದೆ. ನಾಳೆಯ ದಿನವೇ ಮೇಯರ್-ಉಪಮೇಯರ್ ಆಯ್ಕೆಗೆ ಮುಹೂರ್ತ ಫಿಕ್ಸ್ ಆಗಿದೆ. ಆದರೆ ಬಹುಮತ ಇದ್ದರೂ ಕೂಡ ಕಮಲ ಪಾಳೆಯ ಸಾಕಷ್ಟು ಸರ್ಕಸ್ ನಡೆಸಿದೆ. ಎರಡು ಜನ ಪಕ್ಷೇತರ ಅಭ್ಯರ್ಥಿಗಳನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದೆ.

ನಾಳೆ ಆಯ್ಕೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಮತ್ತಷ್ಟು ಕಾರ್ಯಾಚರಣೆ ಚುರುಕುಗೊಳಿಸಿರುವ ಕಮಲ ಪಡೆ ಇಂದು ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಸಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ನೇತೃತ್ವದಲ್ಲಿ ಮಹಾನಗರ ಪಾಲಿಕೆ ನೂತನ ಪಕ್ಷೇತರ ಸದಸ್ಯರಾದ ಕಿಶನ್ ಬೆಳಗಾವಿ, ಚಂದ್ರಿಕಾ ವೆಂಕಟೇಶ್ ಅವರನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಯಿತು.

ಈಗಾಗಲೇ ಅಧಿಕಾರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವುದು ಬಿಜೆಪಿಗೆ ಪಕ್ಕ ಆಗಿದ್ದು ಮತ್ತಷ್ಟು ತಂತ್ರಗಾರಿಕೆ ಮೂಲಕ ತನ್ನ ಸ್ಥಾನವನ್ನು ಭದ್ರ ಪಡೆಸಿಕೊಳ್ಳಲು ಸಾಕಷ್ಟು ಚಿಂತನೆ ನಡೆಸಿದೆ. ಈಗಾಗಲೇ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ ಪಕ್ಷೇತರ ಸದಸ್ಯರು ನಾಳೆ ನಡೆಯಲಿರುವ ಹು-ಧಾ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗೆ ಬೆಂಬಲ ಸೂಚಲಿಸಿದ್ದಾರೆ.

Edited By : Shivu K
Kshetra Samachara

Kshetra Samachara

27/05/2022 11:02 pm

Cinque Terre

67.9 K

Cinque Terre

6

ಸಂಬಂಧಿತ ಸುದ್ದಿ