ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪಾಲಿಕೆಗೆ ಕಮಲ ಪಡೆ ಎಂಟ್ರಿ- ಹಿರಿಯ ನಾಯಕರ ಸಾಥ್

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಆಯ್ಕೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವರು ಹಾಗೂ ಮಾಜಿ ಸಿಎಂ ನೇತೃತ್ವದಲ್ಲಿ ಬೃಹತ್ ಮೆರವಣಿಗೆ ಮೂಲಕ ಚುನಾಯಿತ ಸದಸ್ಯರು ಪಾಲಿಕೆಗೆ ಆಗಮಿಸಿದ್ದಾರೆ.

ಹೌದು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಶಾಸಕರಾದ ಅಮೃತ ದೇಸಾಯಿ ಸೇರಿದಂತೆ ಇತರರ ನೇತೃತ್ವದಲ್ಲಿ ಘೋಷಣೆ ಕೂಗುವ ಮೂಲಕ ಪಾಲಿಕೆಗೆ ಆಗಮಿಸಿದ್ದು, ಕೆಲವೇ ಕ್ಷಣಗಳಲ್ಲಿ ಆಯ್ಕೆ ಪ್ರಕ್ರಿಯೆ ಆರಂಭಗೊಳ್ಳಲಿದೆ.

ಇನ್ನು ಬಿಜೆಪಿಯಿಂದ ಮೇಯರ್ ಸ್ಥಾನಕ್ಕೆ ಈರೇಶ ಅಂಚಟಗೇರಿ, ಉಪಮೇಯರ್ ಸ್ಥಾನಕ್ಕೆ ಉಮಾ ಮುಕುಂದ ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ಕೆಲವೇ ಕ್ಷಣಗಳಲ್ಲಿ ಮೇಯರ್ ಹಾಗೂ ಉಪಮೇಯರ್ ಆಯ್ಕೆ ಫಲಿತಾಂಶ ಹೊರಬಿಳಲಿದೆ

Edited By : Nagesh Gaonkar
Kshetra Samachara

Kshetra Samachara

28/05/2022 02:44 pm

Cinque Terre

19.1 K

Cinque Terre

0

ಸಂಬಂಧಿತ ಸುದ್ದಿ