ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಚುನಾವಣೆ ಆಯ್ಕೆ ಪ್ರಕ್ರಿಯೆ ಆರಂಭ- ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ಎಲೆಕ್ಷನ್

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮೇಯರ್ ಮತ್ತು ಉಪ ಮೇಯರ್ ಚುನಾವಣೆ ಪ್ರಕ್ರಿಯೆ ಪ್ರಾರಂಭವಾಗಿದೆ. ಪ್ರಾದೇಶಿಕ ಆಯುಕ್ತ ಆಮ್ಲನ್ ಆದಿತ್ಯ ಬಿಸ್ವಾಸ್ ಅಧ್ಯಕ್ಷತೆಯಲ್ಲಿ ಚುನಾವಣಾ ಪ್ರಕ್ರಿಯೆ ಆರಂಭಗೊಂಡಿದ್ದು, ಕೆಲವು ಕ್ಷಣಗಳಲ್ಲಿ ಫಲಿತಾಂಶ ಹೊರಬಿಳಲಿದೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಹುಬ್ಬಳ್ಳಿ-ಧಾರವಾಡ ಶಾಸಕರು ಮತ್ತು ಪಾಲಿಕೆ ಸದಸ್ಯರು ಭಾಗಿಯಾಗಿದ್ದು, ಈಗಾಗಲೇ ಪಾಲಿಕೆ ಸಭಾಂಗಣದಲ್ಲಿ ಚುನಾವಣೆ ಪ್ರಕ್ರಿಯೆ ನಡೆದಿದೆ. ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಬಿಜೆಪಿ, ಕಾಂಗ್ರೆಸ್ ಹಾಗೂ ಎಐಎಂಐಎಂ ಅಭ್ಯರ್ಥಿಗಳು ಸ್ಪರ್ಧೆ ನಡೆದಿದ್ದು, ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಬಹುತೇಕ ಖಚಿತವಾಗಿದ್ದು, ಫಲಿತಾಂಶದ ಬಳಿಕವೇ ಅಧಿಕೃತವಾಗಿ ಘೋಷಣೆಯಾಗಬೇಕಿದೆ.

Edited By : Manjunath H D
Kshetra Samachara

Kshetra Samachara

28/05/2022 02:55 pm

Cinque Terre

16.11 K

Cinque Terre

0

ಸಂಬಂಧಿತ ಸುದ್ದಿ