ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ನಡೆದು ಒಂಬತ್ತು ತಿಂಗಳ ಬಳಿಕ ಮೇಯರ್ ಹಾಗೂ ಉಪಮೇಯರ್ ಚುನಾವಣೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಈರೇಶ ಅಂಚಟಗೇರಿ 50 ಪರ ಮತಗಳನ್ನು ಪಡೆಯುವ ಮೂಲಕ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಮಯೂರ ಮೋರೆ ಪರ ಹಾಗೂ ವಿರುದ್ಧ ಕೈ ಎತ್ತುವ ಮೂಲಕ ಮತ ಹಾಗೂ ಸಹಿ ಸಂಗ್ರಹಿಸಲಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಮಯೂರ ಮೋರೆ ಪರ-35, ವಿರುದ್ಧ-51, ತಟಸ್ಥ-03 ಮತಗಳನ್ನು ಪಡೆದಿದ್ದಾರೆ. ಇನ್ನೂ ಬಿಜೆಪಿ ಅಭ್ಯರ್ಥಿ ಈರೇಶ ಅಂಚಟಗೇರಿ ಪರ ಹಾಗೂ ವಿರುದ್ಧ ಕೈ ಎತ್ತುವ ಮೂಲಕ ಮತ ಹಾಗೂ ಸಹಿಗಳ ಸಂಗ್ರಹ ಪ್ರಾರಂಭವಾದ ಬೆನ್ನಲ್ಲೇ ಬಿಜೆಪಿ ಮೇಯರ್ ಅಭ್ಯರ್ಥಿ ಈರೇಶ ಅಂಚಟಗೇರಿಯವರಿಗೆ ಪರ -50, ವಿರುದ್ಧ-35 ತಟಸ್ಥ-03 ಮತಗಳ ಚಲಾವಣೆ ಮೂಲಕ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದು, ಈ ಬಾರಿ ಪಾಲಿಕೆ ಅಧಿಕಾರ ಬಿಜೆಪಿ ತೆಕ್ಕೆಗೆ ತೆಗೆದುಕೊಂಡಿದೆ.
ಇನ್ನೂ ಎಐಎಂಐಎಂ ಪಕ್ಷದ ಮೇಯರ್ ಅಭ್ಯರ್ಥಿ ನಜೀರ್ ಅಹ್ಮದ್ ಹೊನ್ಯಾಳವರಿಗೆ ಪರ-03,ವಿರುದ್ಧ-83 ,ತಟಸ್ಥ- 03 ಮತಗಳ ಚಲಾವಣೆಯಾಗಿದೆ.
Kshetra Samachara
28/05/2022 02:57 pm