ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಆಯ್ಕೆ ಪ್ರಕ್ರಿಯೆ ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಚುನಾಯಿತ ಸದಸ್ಯರು ಹಾಗೂ ಸ್ಥಳೀಯ ಶಾಸಕರು ಆಗಮಿಸಿದ್ದಾರೆ.
ಸಾಕಷ್ಟು ಬೆಂಬಲಿಗರೊಂದಿಗೆ ಪಾಲಿಕೆಗೆ ಆಗಮಿಸಿದ ಚುನಾಯಿತ ಸದಸ್ಯರನ್ನು ದಾಖಲೆಗಳನ್ನು ಪರಿಶೀಲನೆ ಮಾಡುವ ಮೂಲಕ ಪೊಲೀಸ್ ಸಿಬ್ಬಂದಿ ಪ್ರವೇಶಕ್ಕೆ ಅನುಮತಿ ಕಲ್ಪಿಸಿದ್ದಾರೆ. ಇನ್ನೂ ಕಾಂಗ್ರೆಸ್‌ನಿಂದ ಮೇಯರ್ ಸ್ಥಾನಕ್ಕೆ ಮಯೂರ ಮೋರೆ ಹಾಗೂ ಉಪಮೇಯರ್ ಸ್ಥಾನಕ್ಕೆ ದೀಪಾ ನೀರಲಕಟ್ಟಿಯವರು ಸ್ಪರ್ಧಿಸಿದ್ದು, ಇನ್ನೆನೂ ಕೆಲವು ಕ್ಷಣಗಳಲ್ಲಿ ಫಲಿತಾಂಶ ಹೊರಬಿಳಲಿದೆ.
Kshetra Samachara
28/05/2022 02:59 pm