ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸುವೆ: ನೂತನ ಮೇಯರ್ ಅಂಚಟಗೇರಿ ಭರವಸೆ

ಹುಬ್ಬಳ್ಳಿ: ನನ್ನ ಮೇಲೆ ಪಕ್ಷ ಹಾಗೂ ನಾಯಕರು ಭರವಸೆ ಇಟ್ಟು ಜವಾಬ್ದಾರಿ ನೀಡಿದ್ದಾರೆ. ಅವರ ಭರವಸೆಗೆ ತಕ್ಕಂತೆ ಕಾರ್ಯವನ್ನು ನಿರ್ವಹಿಸುವ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ನೂತನ ಮೇಯರ್ ಈರೇಶ್ ಅಂಚಟಗೇರಿ ಹೇಳಿದರು.

ಮೇಯರ್ ಆಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನನ್ನ ಮೇಲೆ ಪಕ್ಷ ಹಾಗೂ ನಾಯಕರು, ಭರವಸೆ ಇಟ್ಟು ಜವಾಬ್ದಾರಿ ನೀಡಿದ್ದಾರೆ‌. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಜಗದೀಶ್ ಶೆಟ್ಟರ್, ಅರವಿಂದ್ ಬೆಲ್ಲದ ಅವರಿಗೆ ನಾನು ಅಭಿನಂದನೆಗಳು ಸಲ್ಲಿಸುತ್ತೇನೆ ಎಂದು ಅವರು ಹೇಳಿದರು.

ಕಳೆದ ಮೂರುವರೆ ವರ್ಷದಿಂದ ಆಡಳಿತ ಅಧಿಕಾರಿಗಳ ತಮ್ಮ ಅಧಿಕಾರ ಚಲಾಯಿಸುತ್ತಿದ್ದರು. ಆದರೇ ಈಗ ನಾವು ಪಾಲಿಕೆ ಆಡಳಿತವನ್ನು ಜನರ ಮನೆ ಬಾಗಿಲಗೆ ತೆಗೆದುಕೊಂಡು ಹೋಗುತ್ತೇವೆ. ಸಾರ್ವಜನಿಕ ಕುಂದು-ಕೊರತೆಗಳನ್ನು ಶೀಘ್ರದಲ್ಲೇ ಇತ್ಯರ್ಥ ಮಾಡುತ್ತೇನೆ ಎಂದರು.

ಜನರ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವ ಮೂಲಕ ಜನಪರ ಕಾರ್ಯವನ್ನು ಮಾಡುತ್ತೇನೆ. ಪಕ್ಷನಿಷ್ಠವಾಗಿ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಅವರು ಭರವಸೆ ನೀಡಿದರು.

Edited By : Manjunath H D
Kshetra Samachara

Kshetra Samachara

28/05/2022 04:16 pm

Cinque Terre

22.67 K

Cinque Terre

6

ಸಂಬಂಧಿತ ಸುದ್ದಿ