ಹುಬ್ಬಳ್ಳಿ: ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವೆ. ಹುಬ್ಬಳ್ಳಿ ಧಾರವಾಡ ಅವಳಿನಗರದ ಜನತೆಯ ಸಮಸ್ಯೆಗಳಿಗೆ ಧ್ವನಿಯಾಗಿ ಕೆಲಸ ನಿರ್ವಹಣೆ ಮಾಡುವೆ ಎಂದು ನೂತನ ಉಪ ಮೇಯರ್ ಉಮಾ ಮುಕ್ಕುಂದ ಹೇಳಿದರು.
ಉಪಮೇಯರ್ ಆಗಿ ಆಯ್ಕೆಯಾದ ಬೆನ್ನಲ್ಲೇ ಮೊದಲ ಬಾರಿಗೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಪಕ್ಷದ ಪ್ರಮುಖರು ನನ್ನ ಮೇಲೆ ಭರವಸೆ ಇಟ್ಟು ಜವಾಬ್ದಾರಿ ನೀಡಿದ್ದಾರೆ. ಅವರ ಋಣ ತೀರಿಸುವ ಕೆಲಸ ಮಾಡುವೆ. ಜನರ ಆಶೋತ್ತರಗಳಿಗೆ ಧ್ವನಿಯಾಗಿ ಕೆಲಸ ಮಾಡುವೆ ಎಂದು ಅವರು ಹೇಳಿದರು.
Kshetra Samachara
28/05/2022 04:20 pm