ಧಾರವಾಡ: ವಿಧಾನ ಪರಿಷತ್ತಿನ ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಯಾವುದೇ ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿಲ್ಲ. ಏಳು ಜನ ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿ ಉಳಿದಿದ್ದಾರೆ ಎಂದು ಸಹಾಯಕ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.
ಕಣದಲ್ಲಿರುವ ಅಭ್ಯರ್ಥಿಗಳ ವಿವರ: ಬಸವರಾಜ ಹೊರಟ್ಟಿ-ಭಾಜಪ, ಬಸವರಾಜ ಗುರಿಕಾರ-ಭಾರಾಕಾಂ, ಶ್ರೀಶೈಲ ಗಡದಿನ್ನಿ-ಜೆಡಿಎಸ್, ಪಕ್ಷೇತರ ಅಭ್ಯರ್ಥಿಗಳಾಗಿ ಕರಬಸಪ್ಪ ಮಧ್ಯಾನ್ನದ, ಕೃಷ್ಣವಾಣಿ ಶ್ರೀನಿವಾಸಗೌಡ, ಫಕೀರಗೌಡ ಕಲ್ಲನಗೌಡರ, ವೆಂಕನಗೌಡ ಗೋವಿಂದಗೌಡರ ಕಣದಲ್ಲಿದ್ದಾರೆ. ಜೂನ್ 13 ರಂದು ಮತದಾನ, ಜೂನ್ 15 ರಂದು ಮತಗಳ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.
Kshetra Samachara
30/05/2022 07:42 pm