ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಬಾಡ ಗ್ರಾಮದ ಬಳಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹನ್ನೊಂದು ಜನರು ಮೃತಪಟ್ಟಿದ್ದು, 15 ಜನರು ಗಂಭೀರವಾಗಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಭೇಟಿ ನೀಡಿ ಧೈರ್ಯ ತುಂಬಿದರು.
ಧಾರವಾಡ ಬಾಡಾ ಬಳಿ ರಸ್ತೆ ಅಪಘಾತದ ಪ್ರಕರಣದಲ್ಲಿ ಮೃತಪಟ್ಟಿರುವ ಮೃತರ ಕುಟುಂಬಗಳಿಗೆ ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲ. ರಸ್ತೆ ಅಪಘಾತದಲ್ಲಿ 11 ಜನ ಮೃತಪಟ್ಟಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.
ಗಾಯಗೊಂಡ ಕುಟುಂಬಕ್ಕೆ 15 ಲಕ್ಷ ಪರಿಹಾರ ನೀಡುವಂತೆ ಒತ್ತಾಯಿಸಿದ್ದು, ಹೆದ್ದಾರಿ ಅಪಘಾತದಲ್ಲಿ ಮೃತಪಟ್ಟವರಿಗೆ ಪರಿಹಾರ ನೀಡಲಾಗಿದೆ. ಆದರೇ ಬಾಡ ಅಪಘಾತದಲ್ಲಿ ಮೃತಪಟ್ಟವರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ.ಅಪಘಾತ ಪ್ರಕರಣಗಳಲ್ಲಿ ತಾರತಮ್ಯ ಏಕೆ? ಕೇವಲ ಪರಿಹಾರ ಘೋಷಣೆ ಮಾಡಿ ಕೈತೊಳೆದುಕೊಳ್ಳಬೇಡಿ, ಆದಷ್ಟು ಈ ಕುಟುಂಬಗಳಿಗೆ ಪರಿಹಾರ ನೀಡಿ, ಒಂದು ವೇಳೆ ಪರಿಹಾರ ನೀಡದೆ ಇದ್ದರೆ ನಿಮ್ಮ ಧಾರವಾಡ ಜಿಲ್ಲೆಯ ಜನತೆ ಪಾಠ ಕಲಿಸುತ್ತಾರೆ ಎಂದು ಕಿಡಿಕಾರಿದರು.
Kshetra Samachara
31/05/2022 11:21 am