ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಕವಿವಿ ಅತಿಥಿ ಉಪನ್ಯಾಸಕರ ಧರಣಿ ಸ್ಥಳಕ್ಕೆ ಹೊರಟ್ಟಿ ಭೇಟಿ

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯ ವ್ಯಾಪ್ತಿಯ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ, ಹುದ್ದೆ ಪದನಾಮ ಬದಲಾವಣೆ ಸೇರಿದಂತೆ‌ ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕವಿವಿಯ ಸಹಾಯಕ ಉಪನ್ಯಾಸಕರು ಹಾಗೂ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಧರಣಿ ನಿರತ ಸ್ಥಳಕ್ಕೆ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಭೇಟಿ ನೀಡಿ ಶಿಕ್ಷಕರ ಸಮಸ್ಯೆಗಳನ್ನು ಆಲಿಸಿದರು.

ಕವಿವಿ ವ್ಯಾಪ್ತಿಗೆ ಬರುವ 600ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರಿದ್ದು, ಯುಜಿಸಿ ನಿಯಮಾವಳಿ ಪ್ರಕಾರ ವೇತನ ಹೆಚ್ಚಿಸುವಂತೆ ವಿಶ್ವವಿದ್ಯಾಲಯ ಹಾಗೂ ಸರ್ಕಾರಕ್ಕೆ ಸಾಕಷ್ಟು ಬಾರಿ ಮನವಿ ಸಲ್ಲಿಸಲಾಗಿದೆ. ಆದರೂ ಯಾವುದೇ ರೀತಿಯ ಸ್ಪಂದನೆ ಸಿಕ್ಕಿಲ್ಲ ಇದರಿಂದ ಅತಿಥಿ ಉಪನ್ಯಾಸಕರಿಗೆ ಅನ್ಯಾಯವಾಗುತ್ತಿದೆ ಎಂದು ಶಿಕ್ಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಹೊರಟ್ಟಿ, ಶಿಕ್ಷಕರ ಅಹವಾಲು ಸ್ವೀಕರಿಸಿದರು.

Edited By :
Kshetra Samachara

Kshetra Samachara

01/06/2022 10:35 pm

Cinque Terre

18.42 K

Cinque Terre

0

ಸಂಬಂಧಿತ ಸುದ್ದಿ