ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ವಿದ್ಯಾಕಾಶಿ ಧಾರವಾಡದಲ್ಲಿ ಗುರಿಕಾರ ಬಿರುಸಿನ ಪ್ರಚಾರ

ಧಾರವಾಡ: ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಬಸವರಾಜ ಗುರಿಕಾರ ಅವರು ವಿದ್ಯಾಕಾಶಿ ಧಾರವಾಡದ ಅನೇಕ ಕಾಲೇಜುಗಳಿಗೆ ಭೇಟಿ ನೀಡಿ ಶಿಕ್ಷಕರಿಂದ ಮತಯಾಚನೆ ಮಾಡಿದರು.

ಉತ್ತರ ಕನ್ನಡ ಜಿಲ್ಲೆಯ ವಿವಿಧ ಊರುಗಳಿಗೆ ತೆರಳಿ ಮತಯಾಚನೆ ಮಾಡಿ ಬಂದ ಬಳಿಕ ಇದೀಗ ಗುರಿಕಾರ ಅವರು ಧಾರವಾಡದ ವಿವಿಧ ಕಾಲೇಜುಳಿಗೂ ತೆರಳಿ ಅಬ್ಬರದ ಪ್ರಚಾರ ನಡೆಸಿದರು.

ಹುರಕಡ್ಲಿ ಅಜ್ಜ ಕಾನೂನು ಕಾಲೇಜು, ಮೃತ್ಯುಂಜಯ ಕಾಲೇಜು, ಶ್ರೀಸಾಯಿ ಪದವಿಪೂರ್ವ ಕಾಲೇಜು, ಕೆಸಿಡಿ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ವಿದ್ಯಾರಣ್ಯ ಪದವಿಪೂರ್ವ ಕಾಲೇಜು ಸೇರಿದಂತೆ ಅನೇಕ ಕಡೆಗಳಲ್ಲಿ ತೆರಳಿ ಗುರಿಕಾರ ಅವರು ಮತಯಾಚನೆ ಮಾಡಿದರು.

ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡು ಈ ಚುನಾವಣೆ ನಡೆಯುತ್ತಿದ್ದು, ಕಳೆದ ಮೂರ್ನಾಲ್ಕು ದಿನಗಳಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಚಾರ ನಡೆಸಿದ ನಂತರ ಇದೀಗ ಧಾರವಾಡದಲ್ಲೂ ಗುರಿಕಾರ ಅವರು ಬಿರುಸಿನ ಪ್ರಚಾರ ನಡೆಸಿದರು.

ಈ ವೇಳೆ ಶಿಕ್ಷಕರನ್ನುದ್ದೇಶಿಸಿ ಮಾತನಾಡಿದ ಗುರಿಕಾರ ಅವರು, ಶಿಕ್ಷಕರ ಹಲವಾರು ಸಮಸ್ಯೆಗಳನ್ನು ಬಗೆಹರಿಸುತ್ತೇನೆ ಎಂದು ಭರವಸೆ ಕೊಟ್ಟವರು ಆ ಸಮಸ್ಯೆಗಳತ್ತ ತಿರುಗಿಯೂ ನೋಡಿಲ್ಲ. ಹೀಗಾಗಿ ಪ್ರಸಕ್ತ ವರ್ಷ ಶಿಕ್ಷಕರು ಬದಲಾವಣೆ ಬಯಸಿದ್ದಾರೆ ಎಂಬುದು ಪ್ರಚಾರದ ವೇಳೆ ಗೊತ್ತಾಗಿದೆ. ಹೋದ ಕಡೆಗಳಲ್ಲೆಲ್ಲ ಶಿಕ್ಷಕರು ಉತ್ತಮ ಸ್ಪಂದನೆ ನೀಡುತ್ತಿದ್ದಾರೆ ಎಂದರು.

ಶಿಕ್ಷಕರ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧಿಸಿದ್ದು, ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದೇ ಆದಲ್ಲಿ ಆ ಎಲ್ಲ ಸಮಸ್ಯೆಗಳಿಗೆ ನಾನು ಧ್ವನಿಯಾಗಿ ಬಗೆಹರಿಸುವ ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಧಾರವಾಡದ ಅನೇಕ ಕಾಲೇಜುಗಳ ಶಿಕ್ಷಕರು ಕೂಡ ಬಸವರಾಜ ಗುರಿಕಾರ ಅವರಿಗೆ ಉತ್ತಮ ಸ್ಪಂದನೆ ನೀಡಿದರು.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

03/06/2022 07:55 pm

Cinque Terre

169.66 K

Cinque Terre

1

ಸಂಬಂಧಿತ ಸುದ್ದಿ