ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ರಾಜ್ಯಸಭೆ ಚುನಾವಣೆಯಲ್ಲಿ ನನಗೆ ಯಾವ ತಳಮಳವೂ ಇಲ್ಲ; ಮಾಜಿ ಸಿಎಂ ಕುಮಾರಸ್ವಾಮಿ

ರಾಜ್ಯ ಸಭೆ ಚುನಾವಣೆಗೆ ಸಂಬಂಧಿಸಿದಂತೆ ಕುಮಾರಸ್ವಾಮಿ ಅವರು ಕಾಂಗ್ರೆಸ್ ನಾಯಕರು, ಸೋನಿಯಾ ಗಾಂಧಿಯವರಿಗೆ ಮಾತನಾಡಿದ್ದಾರೆಂಬ ವದಂತಿ ಶುದ್ಧ ಸುಳ್ಳು, ನಾನು ಯಾವ ಕಾಂಗ್ರೆಸ್ ನಾಯಕರೊಂದಿಗೆ ಮಾತನಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಮುಖಂಡ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಗುನ್ನಾ, ತಳಮಳ ಎಂಬ ಚರ್ಚೆಗಳು ಆಗುತ್ತಾ ಇವೆ. ಆದರೆ ಯಾವುದೇ ರೀತಿಯ ತಳಮಳ, ನಡುಕ ಪಕ್ಷಕ್ಕೆ ಆಗಿಲ್ಲ. ಅದಕ್ಕಾಗಿಯೇ ನಾನು ರಾಜ್ಯಸಭಾ ಚುನಾವಣೆ ಜಂಜಾಟದಿಂದ ದೂರ ಉಳಿದಿದ್ದ. ಆದರೆ ಕಾಂಗ್ರೆಸ್ ನಾಯಕರು ಜೆಡಿಎಸ್ ಪಕ್ಷವನ್ನು ಅವಮಾನ ಮಾಡಲು ಹಲವಾರು ಹೇಳಿಕೆ ನೀಡಿದ್ದಾರೆ. ಪಕ್ಷವನ್ನು ನಿರ್ನಾಮ ಮಾಡುವ ಕೆಲಸ ಮಾಡಲಾಗುತ್ತಿದೆ ಎಂದು ಆರೋಪ ಮಾಡಿದರು.

ರಾಜಕಾರಣದಲ್ಲಿ ಆಶಾವಾದ ಇರಬೇಕು. ಹಾಗಾಗಿ ನಮ್ಮ ಪಕ್ಷದಿಂದ ರಾಜ್ಯಸಭೆಗೆ ಅಭ್ಯರ್ಥಿಗಳನ್ನು ನಿಲ್ಲಿಸಿದ್ದೇವೆ. ನಮ್ಮಲ್ಲಿ 32 ಮತಗಳಿವೆ. 3-4 ಜನರಲ್ಲಿ ಅಸಮಾಧಾನ ಇರುವುದು ನಿಜ. ಅವರನ್ನು ವಿಶ್ವಾಸಕ್ಕೆ ಪಡೆಯುವ ಕೆಲಸ ನಡೆಯುತ್ತಿದೆ ಎಂದು ಹೇಳಿದರು

Edited By :
Kshetra Samachara

Kshetra Samachara

04/06/2022 12:39 pm

Cinque Terre

28.54 K

Cinque Terre

2

ಸಂಬಂಧಿತ ಸುದ್ದಿ