ಹುಬ್ಬಳ್ಳಿ: ಆರ್‌ಎಸ್‌ಎಸ್ ಚಡ್ಡಿ ಸುಡುತ್ತೆವೆಂದು ಎಲ್ಲಾ ಕಡೆ ಕಾಂಗ್ರೆಸ್ ನಾಯಕರು ಹೇಳಿಕೊಳ್ಳುತ್ತಾ ಓಡಾಡುತ್ತಿದ್ದಾರೆ. ಆರ್‌ಎಸ್‌ಎಸ್ ಕಳೆದ 75 ವರ್ಷಗಳಿಂದ ಜನಸೇವೆ ಮಾಡುತ್ತಾ ಬಂದಿದೆ, ಉತ್ತಮ ದೇಶಭಕ್ತಿ ಕೆಲಸ ಮಾಡಿದೆ. ಜನರು ಸಂಕಷ್ಟದಲ್ಲಿದ್ದಾಗ ಸಹಾಯ ಮಾಡಿದೆ. ಆದರೆ ವಿಧಾನ ಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಗುಡುಗಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೀಗೇ ಮಾಡಿಯೇ ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಕರ್ನಾಟಕದಲ್ಲಿ ಇಲ್ಲವಾಗುತ್ತದೆ ಎಂದರು.
ರಾಜ್ಯಸಭೆ ಚುನಾವಣೆಯಲ್ಲಿ ಕ್ರಾಸ್ ವೋಟಿಂಗ್ ವಿಚಾರವಾಗಿ ಮಾತನಾಡಿದ ಸಿಎಂ, ಜೂನ್ 10ರವರೆಗೂ ಕಾದು ನೋಡಿ ಎಂದರು. ಇನ್ನು ಪಠ್ಯ ವಿಚಾರದಲ್ಲೂ ವಿರೋಧ ಪಕ್ಷಗಳು ರಾಜಕಾರಣ ಮಾಡುತ್ತಿವೆ. ಅದಕ್ಕೆಲ್ಲವು ನಮ್ಮ ಶಿಕ್ಷಣ ಸಚಿವರು ಉತ್ತರ ನೀಡಿದ್ದಾರೆ ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
05/06/2022 11:24 am