ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗುರಿಕಾರ ಪರ ಕಣಕ್ಕಿಳಿಯಲಿದೆ ಟಗರು

ಧಾರವಾಡ: ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧೆ ಮಾಡಿರುವ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ಅವರ ಪರವಾಗಿ ಮತಯಾಚನೆ ಮಾಡಲು ಮಾಜಿ ಸಿಎಂ ಸಿದ್ದರಾಮಯ್ಯ ಧಾರವಾಡಕ್ಕೆ ಬರಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ದೀಪಕ ಚಿಂಚೋರೆ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಬಸವರಾಜ ಗುರಿಕಾರ ಅವರು ನಾಲ್ಕೂ ಜಿಲ್ಲೆಗಳಲ್ಲಿ ಪ್ರಚಾರ ನಡೆಸಿದ್ದಾರೆ. ಕಾಂಗ್ರೆಸ್ ಮುಖಂಡರು ಕೂಡ ತಳಮಟ್ಟದಿಂದ ಶಿಕ್ಷಕ ಮತದಾರರನ್ನು ಸಂಪರ್ಕಿಸಿ ಗುರಿಕಾರ ಅವರಿಗೆ ಬೆಂಬಲ ನೀಡುವಂತೆ ಮನವಿ ಮಾಡುತ್ತಿದ್ದಾರೆ. ಜೂನ್.8 ರಂದು ಬೆಳಿಗ್ಗೆ ಧಾರವಾಡದ ದೈವಜ್ಞ ಕಲ್ಯಾಣಮಂಟಪದಲ್ಲಿ ಸಮಾವೇಶ ನಡೆಯಲಿದ್ದು, ಈ ಸಮಾವೇಶಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಈ ಚುನಾವಣೆಯಲ್ಲಿ ನಾನು ಸೆಕ್ಯುಲರ್ ಎನ್ನುತ್ತಿದ್ದವರಿಗೆ ತಕ್ಕ ಪಾಠ ಕಲಿಸಲಾಗುವುದು ಎಂದರು.

Edited By : Nirmala Aralikatti
Kshetra Samachara

Kshetra Samachara

06/06/2022 04:06 pm

Cinque Terre

11.11 K

Cinque Terre

2

ಸಂಬಂಧಿತ ಸುದ್ದಿ