ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಹೊರಟ್ಟಿ ಪರವಾಗಿ ಮತಯಾಚಿಸಿದ ಸಚಿವ ಮುನೇನಕೊಪ್ಪ

ನವಲಗುಂದ : ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನಡೆಯುತ್ತಿರುವ ಚುನಾವಣೆಯ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿಯವರ ಪರವಾಗಿ ಚುನಾವಣಾ ಪ್ರಚಾರ ಹಾಗೂ ಮತಯಾಚನೆಗಾಗಿ ನವಲಗುಂದದ ಹಲವು ಪ್ರೌಢ ಶಾಲೆ ಹಾಗೂ ಕಾಲೇಜುಗಳಿಗೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಭೇಟಿ ನೀಡಿದರು.

ನವಲಗುಂದ ಪಟ್ಟಣದ ಮಾಡೆಲ್ ಹೈಸ್ಕೂಲ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಶ್ರೀ ಶಂಕರ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಸೇರಿದಂತೆ ಹಲವು ಕಡೆಗಳಲ್ಲಿ ಭೇಟಿ ನೀಡಿ, ಶಿಕ್ಷಕರಿಗೆ ಮತಯಾಚಣೆ ಮಾಡಿದರು. ಇದೆ ಸಂದರ್ಭದಲ್ಲಿ ಹಲವೆಡೆ ಸಚಿವ ಮುನೇನಕೊಪ್ಪ ಅವರಿಗೆ ಸನ್ಮಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಬಸವರಾಜ ಕುಂದಗೋಳಮಠ, ನವಲಗುಂದ ತಾಲೂಕು ಬಿಜೆಪಿ ಅಧ್ಯಕ್ಷರಾದ ದಾನಪ್ಪಗೌಡರು ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

06/06/2022 05:26 pm

Cinque Terre

8.97 K

Cinque Terre

0

ಸಂಬಂಧಿತ ಸುದ್ದಿ