ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಗುರಿಕಾರ ಪ್ರಚಾರಕ್ಕೆ ಸಾಥ್ ನೀಡಿದ ಮಾಜಿ ಸಚಿವ ದೇಶಪಾಂಡೆ

ಧಾರವಾಡ: ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ ದಿನೇ ದಿನೇ ರಂಗು ಪಡೆದುಕೊಳ್ಳುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ಅವರು ತಮ್ಮ ಪ್ರಚಾರ ಕಾರ್ಯವನ್ನು ಚುರುಕುಗೊಳಿಸಿದ್ದು, ಇವರಿಗೆ ಕಾಂಗ್ರೆಸ್ ಹಿರಿಯ ಮುಖಂಡರು ಸಾಥ್ ನೀಡುತ್ತಿದ್ದಾರೆ. ಸೋಮವಾರ ಬಸವರಾಜ ಗುರಿಕಾರ ಪರವಾಗಿ ನಡೆದ ಪ್ರಚಾರ ಕಾರ್ಯದಲ್ಲಿ ಸ್ವತಃ ಮಾಜಿ ಸಚಿವ ಕಾಂಗ್ರೆಸ್ ಹಿರಿಯ ಮುಖಂಡ ಆರ್.ವಿ.ದೇಶಪಾಂಡೆ ಅವರು ಪಾಲ್ಗೊಳ್ಳುವ ಮೂಲಕ ಗುರಿಕಾರ ಅವರ ಪರವಾಗಿ ಶಿಕ್ಷಕರಲ್ಲಿ ಮತಯಾಚನೆ ಮಾಡಿದರು.

ಧಾರವಾಡದ ಮಾಳಮಡ್ಡಿಯಲ್ಲಿರುವ ಕೆ.ಇ.ಬೋರ್ಡ್ ಕಾಲೇಜಿನಲ್ಲಿ ನಡೆದ ಶಿಕ್ಷಕರ ಸಮಾಲೋಚನೆ ಕಾರ್ಯಕ್ರಮಕ್ಕೆ ಆಗಮಿಸಿದ ದೇಶಪಾಂಡೆ ಅವರು, ಪ್ರಸಕ್ತ ವರ್ಷ ಕಾಂಗ್ರೆಸ್ ಅಭ್ಯರ್ಥಿ ಗುರಿಕಾರ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಇನ್ನು ಇದಕ್ಕೂ ಮುನ್ನ ಬಸವರಾಜ ಗುರಿಕಾರ ಅವರು ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಬ್ಬರದ ಪ್ರಚಾರ ನಡೆಸಿದರು. ಸದ್ಗುರು ಗಂಗಾಧರ ಹೈಸ್ಕೂಲ್, ಸದ್ಗುರು ಗಂಗಾಧರ ಐಟಿಐ, ಪಿಯುಸಿ ಹಾಗೂ ಪದವಿ ಕಾಲೇಜು, ದುರ್ಗಾದೇವಿ ಕನ್ನಡ ಮಾಧ್ಯಮ ಪ್ರೌಢಶಾಲೆ, ದುರ್ಗಾದೇವಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ, ಕಲಾ ಮತ್ತು ವಾಣಿಜ್ಯ ಮಹಿಳಾ ವಿದ್ಯಾಲಯ, ಬಾಲಕಿಯರ ಆಂಗ್ಲ ಮಾಧ್ಯಮ ಶಾಲೆ, ಚಿನ್ಮಯ ವಿದ್ಯಾಲಯ, ಮಹಿಳಾ ವಿದ್ಯಾಪೀಠ, ಬಾಲಕಿಯರ ಪ್ರೌಢಶಾಲೆ ಮತ್ತು ಕಾಲೇಜು, ಸರ್ಕಾರಿ ಪ್ರೌಢಶಾಲೆ ಸೇರಿದಂತೆ ಅನೇಕ ಕಡೆಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು.

ಬಸವರಾಜ ಗುರಿಕಾರ ಹಾಗೂ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಈಗಾಗಲೇ ಗುರಿಕಾರ ಅವರು ಎರಡೆರಡು ಸುತ್ತಿನ ಪ್ರಚಾರ ನಡೆಸಿದ್ದಾರೆ. ಅಲ್ಲದೇ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಅಧ್ಯಕ್ಷರಾಗಿ ಗುರಿಕಾರ ಕೆಲಸ ಮಾಡಿದ್ದು, ಶಿಕ್ಷಕರ ಸಮಸ್ಯೆಗಳನ್ನು ಅರಿತವರಾಗಿದ್ದಾರೆ. ಹೀಗಾಗಿ ಪ್ರಸಕ್ತ ವರ್ಷ ಶಿಕ್ಷಕರ ಹಿತಕ್ಕಾಗಿ ಗುರಿಕಾರ ಅವರನ್ನು ಬೆಂಬಲಿಸಿ ಗೆಲ್ಲಿಸಬೇಕು ಎಂದು ಆರ್.ವಿ.ದೇಶಪಾಂಡೆ ಮನವಿ ಮಾಡಿದರು.

ಒಟ್ಟಾರೆಯಾಗಿ ಕಾಂಗ್ರೆಸ್ ಅಭ್ಯರ್ಥಿ ಗುರಿಕಾರ ಅವರ ಪರವಾಗಿ ಬಿರುಸಿನ ಪ್ರಚಾರ ನಡೆಯುತ್ತಿದ್ದು, ಕಾಂಗ್ರೆಸ್‌ನ ಹಿರಿಯ ಮುಖಂಡರು ಒಬ್ಬೊಬ್ಬರಾಗಿ ಅಬ್ಬರದ ಪ್ರಚಾರಕ್ಕೆ ಮುಂದಾಗುತ್ತಿದ್ದಾರೆ. ಜೂನ್.8 ರಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಗುರಿಕಾರ ಅವರ ಪರವಾಗಿ ಧಾರವಾಡಕ್ಕೆ ಪ್ರಚಾರಕ್ಕೆ ಆಗಮಿಸಲಿದ್ದಾರೆ.

Edited By : Manjunath H D
Kshetra Samachara

Kshetra Samachara

06/06/2022 08:09 pm

Cinque Terre

33.13 K

Cinque Terre

0

ಸಂಬಂಧಿತ ಸುದ್ದಿ