ಕುಂದಗೋಳ : ಪಟ್ಟಣದ ಅಭಿವೃದ್ಧಿಗಾಗಿ ಹಾಗೂ ಪಟ್ಟಣದ ವ್ಯಾಪ್ತಿಯ ವಿಸ್ತರಣೆಗೆ ಹಾಗೂ ವಿಶೇಷ ಅನುದಾನ ನೀಡುವ ಕುರಿತು ಮುಖ್ಯಮಂತ್ರಿ ಗೃಹ ಕಛೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಪಟ್ಟಣ ಪಂಚಾಯತಿ ಅಧ್ಯಕ್ಷರು ಹಾಗೂ ಸದಸ್ಯರು ಬಿಜೆಪಿ ಮುಖಂಡರು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.
ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಅಭಿವೃದ್ಧಿ ವಿಷಯವಾಗಿ ಅನುದಾನ ಬಿಡುಗಡೆ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಪಟ್ಟಣ ಪಂಚಾಯತಿ ಅಧ್ಯಕ್ಷ ಗಣೇಶ್ ಕೊಕಾಟೆ ಪಬ್ಲಿಕ್ ನೆಕ್ಸ್ಟ್ ಮಾಹಿತಿ ನೀಡಿದ್ದಾರೆ.
ಈ ಸಂದರ್ಭದಲ್ಲಿ ಸಿ.ಎಮ್.ಕಾಳೆ, ಬಸವರಾಜ ಕೊಪ್ಪದ, ಮಂಜುನಾಥ್ ಹಿರೇಮಠ, ಬಸವರಾಜ ಗಂಗಾಯಿ, ಪೃಥ್ವಿರಾಜ ಕಾಳೆ, ವಾಗೀಶ್ ಗಂಗಾಯಿ, ಪ್ರದೀಪ್ ಕಾಳೆ ಉಪಸ್ಥಿತರಿದ್ದರು.
Kshetra Samachara
06/06/2022 08:20 pm