ಧಾರವಾಡ: ಪದೇ ಪದೇ ಆರ್‌ಎಸ್‌ಎಸ್ ಬಗ್ಗೆ ಮಾತನಾಡುವ ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಚಡ್ಡಿ ಹೋಗಿ ಪ್ಯಾಂಟ್ ಬಂದಿರುವ ವಿಷಯವೇ ಇನ್ನೂ ಗೊತ್ತಿಲ್ಲವೆಂದು ಕಾಣುತ್ತದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.
ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಬಂದಾಗಿನಿಂದ ಕಾಂಗ್ರೆಸ್‌ನವರು ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ. ಅವರಿಗೆ ಮಾತನಾಡಲು ಏನೂ ಸಿಗದೇ ಇದ್ದಾಗ ಆರ್‌ಎಸ್‌ಎಸ್ ಬಗ್ಗೆ ಮಾತನಾಡುತ್ತಾರೆ. ಮಾತನಾಡಲು ಬೇಕಾದಷ್ಟು ವಿಷಯಗಳಿವೆ. ಅವುಗಳ ಬಗ್ಗೆ ಸಿದ್ದರಾಮಯ್ಯನವರು ಮಾತನಾಡಲಿ. ಸಮಸ್ಯೆಗಳ ಸಂದರ್ಭದಲ್ಲಿ ಸಿದ್ದರಾಮಯ್ಯನವರು ಸರ್ಕಾರಕ್ಕೆ ಸಲಹೆಗಳನ್ನು ನೀಡಬೇಕು ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
08/06/2022 12:41 pm