ಹುಬ್ಬಳ್ಳಿ: ಸುಪ್ರೀಂಕೋರ್ಟ್ ನಿಯಮ ಪಾಲಿಸದೆ ಇರುವವರ ಮೇಲೆ ಗುಂಡಿಟ್ಟು ಹೊಡಿಯೋ ಹೇಳಿಕೆಗೆ ಈಗಲೂ ಬದ್ಧ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಪುನರುಚ್ಚಾರ ಮಾಡಿದ್ದಾರೆ.
ಕೇಶ್ವಾಪೂರ ಮಧುರಾ ಕಾಲೋನಿಯಲ್ಲಿರುವ ಜಗದೀಶ್ ಮನೆ ಎದುರು ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಧ್ವನಿವರ್ಧಕ ವಿಚಾರದಲ್ಲಿ ಯಾರು ಕಾನೂನು ಪಾಲನೆ ಮಾಡೋದಿಲ್ವೋ ಅವರಿಗೆ ಗುಂಡ್ಲಪೇಟೆ ಗತಿಯಾಗುತ್ತದೆ. ಬಿಜೆಪಿ ಜನಪ್ರತಿನಿಧಿಗಳಿಗೆ ಎಚ್ಚರಿಕೆ ಕೊಡಲೆಂದೇ ಇವತ್ತು ಹೋರಾಟ ಮಾಡ್ತಿದ್ದೇವೆ. ನೀವು ಇದೇ ರೀತಿ ನಿರ್ಲಕ್ಷ್ಯ ಮಾಡಿದರೆ ನಿಮ್ಮ ಮನೆಗಳ ಮುಂದೆಯೇ ಭಜನೆ ಆರಂಭಿಸುತ್ತೇವೆ ಅಂತ ಎಚ್ಚರಿಕೆ ನೀಡಿದ್ರು..
ಯೋಗಿ ಆದಿತ್ಯನಾಥನ ರೀತಿಯಲ್ಲಿ ಬಸವರಾಜ ಬೊಮ್ಮಾಯಿಯವರು ಗಟ್ಟಿಯಾಗಿ ನಿಲ್ಲಬೇಕು. ಕಣ್ಣೀರು ಒರೆಸುವ ತಂತ್ರಗಾರಿಕೆ ಬಿಡಬೇಕು. ನಿಮ್ಮ ಕೈಲಿ ಆಗದೇ ಇದ್ದಲ್ಲಿ ರಾಜೀನಾಮೆ ಕೊಡಿ. ನನಗೆ ಅಧಿಕಾರ ಕೊಡಿ 24 ಗಂಟೆಯಲ್ಲಿ ಅದನ್ನು ಮಾಡಿ ತೋರಿಸುತ್ತೇನೆ. ನಿಯಮ ಪಾಲಿಸದೇ ಇದ್ದವರ ಮೇಲೆ ಗುಂಡು ಹಾರಿಸುತ್ತೇನೆ ಎಂದು ಮತ್ತೆ ಎಚ್ಚರಿಕೆ ನೀಡಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
08/06/2022 03:37 pm