ಧಾರವಾಡ:ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ಹಾಕುವ ಕೃತ್ಯಕ್ಕೆ ಕಿಡಿಗೇಡಿಗಳು ಕೈ ಹಾಕಿದ್ದಾರೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಗೆ ದೂರು ಸಲ್ಲಿಸಲಾಗಿದೆ ಎಂದು ಧಾರವಾಡದಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದರು.
ಹುಬ್ಬಳ್ಳಿ ಧಾರವಾಡ ಕಮೀಷನರ್ ಕಚೇರಿ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಉಡುಪಿಯ ಮಾರಿಗುಡಿ ಎಂಬ ಸಾಮಾಜಿಕ ಜಾಲತಾಣದ ಪೇಜ್ ಮೂಲಕ ಪೋಸ್ಟ್ ಮಾಡಲಾಗಿದೆ. ಅದಕ್ಕೆ 60 ಜನ ಲೈಕ್ ಮಾಡಿದ್ದಾರೆ. ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈಗಾಗಲೇ ಲಿಖಿತ ದೂರು ಸಹ ಸಲ್ಲಿಸಲಾಗಿದೆ ಎಂದು ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಮಾಧ್ಯಮಗಳಿಗೆ ಈಗ ಪ್ರತಿಕ್ರಿಯೆ ನೀಡಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
09/06/2022 07:32 pm