ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ರಾಷ್ಟ್ರೀಯ ಹೆದ್ದಾರಿ ತಡೆದು ಗ್ರಾಮಸ್ಥರ ಪ್ರತಿಭಟನೆ: ಪೊಲೀಸರ ಜೊತೆಗೆ ಮಾತಿನ ಚಕಮಕಿ

ಹುಬ್ಬಳ್ಳಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಕಷ್ಟು ಅಪಘಾತಗಳು ಸಂಭವಿಸಿದರೂ ಕೂಡ ಸರ್ಕಾರವಾಗಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವಾಗಲಿ ಎಚ್ಚೆತ್ತುಕೊಂಡಿಲ್ಲ. ಹೀಗಾಗಿ ರೈತ ಮುಖಂಡರು ಹಾಗೂ ನೂಲ್ವಿ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಹುಬ್ಬಳ್ಳಿ ತಾಲೂಕಿನ ನೂಲ್ವಿ ಗ್ರಾಮದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಕಷ್ಟು ಅಪಘಾತ ಸಂಭವಿಸುತ್ತಿವೆ. ಸರ್ವೀಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕಿಸುವ ವೇಳೆಯಲ್ಲಿ ಸುಮಾರು ಅಪಘಾತಗಳು ನಡೆದಿವೆ. ಕೂಡಲೇ ಅಂಡರ್ ಪಾಸ್ ಅಥವಾ ಪ್ಲೈಓವರ್ ನಿರ್ಮಿಸಬೇಕೆಂದು ಒತ್ತಾಯಿಸಿದರು.

ಈಗಾಗಲೇ ಸುಮಾರು ಬಾರಿ ಮನವಿ ಮಾಡಿದರೂ ಕೂಡ ಯಾವುದೇ ರೀತಿಯಲ್ಲಿ ಕ್ರಮಗಳನ್ನು ಜರುಗಿಸದೇ ಇರುವ ಹಿನ್ನೆಲೆಯಲ್ಲಿ ಸರ್ಕಾರ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಇನ್ನೂ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದ ವೇಳೆಯಲ್ಲಿ ಸ್ಥಳಕ್ಕೆ ಆಗಮಿಸಿದ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೋಲೀಸರು ಪ್ರತಿಭಟನಾಕಾರರ ಮನವೊಲಿಸಲು ಮುಂದಾಗಿದ್ದು, ಇದೇ ವೇಳೆ ಪೊಲೀಸರ ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದೆ.

Edited By : Nagesh Gaonkar
Kshetra Samachara

Kshetra Samachara

10/06/2022 04:08 pm

Cinque Terre

92.46 K

Cinque Terre

1

ಸಂಬಂಧಿತ ಸುದ್ದಿ