ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪಶ್ಚಿಮ ಶಿಕ್ಷಕರ ಪರಿಷತ್ ಚುನಾವಣೆ ಮತದಾನ ಆರಂಭ: ಏಳು ಜನರ ಹಣೆಬರಹ ನಿರ್ಧಾರ!

ಹುಬ್ಬಳ್ಳಿ: ಪಶ್ಚಿಮ ಶಿಕ್ಷಕರ ಪರಿಷತ್ ಚುನಾವಣೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಬೆಳಿಗ್ಗೆ ಎಂಟು ಗಂಟೆಯಿಂದ ಮತದಾನ ಆರಂಭವಾಗಿದೆ. ಸಾಯಂಕಾಲ 5 ಗಂಟೆಯ ವರೆಗೆ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ.

ಹೌದು.. 7 ಅಭ್ಯರ್ಥಿಗಳ ಹಣೆಬರಹ ಬರೆಯಲಿರುವ ಶಿಕ್ಷಕ ಮತದಾರರು, ನಾಲ್ಕು ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ಪಶ್ಚಿಮ ಶಿಕ್ಷಕರ ಮತಕ್ಷೇತ್ರಕ್ಕೆ ಬಿಜೆಪಿಯಿಂದ ಬಸವರಾಜ ಹೊರಟ್ಟಿ, ಕಾಂಗ್ರೆಸ್‌ನಿಂದ ಬಸವರಾಜ ಗುರಿಕಾರ, ಜೆಡಿಎಸ್‌ನ ಶ್ರೀಶೈಲ ಗಡದಿನ್ನಿ ಸೇರಿದಂತೆ ಏಳು ಜನ ಅಖಾಡದಲ್ಲಿದ್ದು, ಮಾಜಿ ಸಭಾಪತಿ ಬಸವರಾಜ ಹೊರಟ್ಟಿಗೆ ಪ್ರತಿಷ್ಠೆಯ ಚುನಾವಣೆಯಾಗಿದೆ.

ಇನ್ನೂ ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ನಾಲ್ಕು ಜಿಲ್ಲೆಗಳಲ್ಲಿ 76 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ.‌ ಒಟ್ಟು 17,973 ಮತದಾರರು ಮತ ಚಲಾವಣೆ ಮಾಡಲಿದ್ದಾರೆ. ಇವರಲ್ಲಿ 10,983 ಪುರುಷ ಹಾಗೂ 6,990 ಮಹಿಳಾ ಮತದಾರರಿದ್ದು, ಧಾರವಾಡ -21, ಉತ್ತರ ಕನ್ನಡ-15, ಹಾವೇರಿ-26, ಗದಗ- 14 ಸೇರಿದಂತೆ ಹೆಚ್ಚುವರಿಯಾಗಿ ಒಂದು ಮತಗಟ್ಟೆ ಸ್ಥಾಪನೆ ಮಾಡಲಾಗಿದ್ದು, ಶಾಂತಿಯುತ ಮತದಾನಕ್ಕೆ ಪೊಲೀಸ್ ಬಿಗಿ ಭದ್ರತೆ‌ ನಿಯೋಜನೆ ಮಾಡಲಾಗಿದೆ.

Edited By :
Kshetra Samachara

Kshetra Samachara

13/06/2022 09:38 am

Cinque Terre

34.64 K

Cinque Terre

0

ಸಂಬಂಧಿತ ಸುದ್ದಿ