ನವಲಗುಂದ : ರಾಜ್ಯದ ಎಲ್ಲಾ ಶಿಕ್ಷಕ ಬಂಧುಗಳು ಭಾರತೀಯ ಜನತಾ ಪಾರ್ಟಿಯಿಂದ ಎಲ್ಲಾ ಅಭ್ಯರ್ಥಿಗಳಿಗೂ ಆಶೀರ್ವಾದ ಮಾಡುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದು, ಹೊರಟ್ಟಿಯವರು ಹೊಸ ಇತಿಹಾಸ ನಿರ್ಮಿಸುತ್ತಾರೆ ಎಂದು ನವಲಗುಂದ ಪಟ್ಟಣದಲ್ಲಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಹೇಳಿದರು.
ಹೌದು ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಚುನಾವಣೆಯ ಹಿನ್ನೆಲೆ ನವಲಗುಂದ ಪಟ್ಟಣದಲ್ಲಿ ಮಾತನಾಡಿದ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು, ಧಾರವಾಡ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಭಾರತೀಯ ಜನತಾ ಪಾರ್ಟಿಯಿಂದ ಸ್ಪರ್ಧಿಸಿದ ಬಸವರಾಜ ಹೊರಟ್ಟಿಯವರಿಗೆ ಶಿಕ್ಷಕ ಬಂಧುಗಳು ಬಹಳ ಹೆಚ್ಚಿನ ರೀತಿಯಿಂದ ಪ್ರಥಮ ಪ್ರಾಶ್ಯಸ್ತದ ಮತವನ್ನು ಮಾಡುತ್ತೇವೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಬಸವರಾಜ ಹೊರಟ್ಟಿಯವರು ಖಂಡಿತವಾಗಿ ಹೊಸ ಇತಿಹಾಸ ನಿರ್ಮಿಸುತ್ತಾರೆ ಎನ್ನುವ ವಿಶ್ವಾಸವನ್ನು ವ್ಯಕ್ತಪಡಿಸುತ್ತೇನೆ ಎಂದರು.
Kshetra Samachara
13/06/2022 03:15 pm