ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಗುರಿ ಮುಟ್ಟುತ್ತಾರೆ ಗುರಿಕಾರ: ಪತ್ನಿ ನಾಗರತ್ನಾ ವಿಶ್ವಾಸ

ಧಾರವಾಡ: ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ನಿನ್ನೆ ಚುನಾವಣೆ ನಡೆದಿದ್ದು, ನಾಳೆ ಮತ ಎಣಿಕೆ ನಡೆಯಲಿದ್ದು, ಚುನಾವಣೆಯಲ್ಲಿ ಬಸವರಾಜ ಗುರಿಕಾರ ಗೆಲುವು ಸಾಧಿಸಲಿದ್ದಾರೆ ಎಂದು ಬಸವರಾಜ ಗುರಿಕಾರ ಅವರ ಪತ್ನಿ ನಾಗರತ್ನಾ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಪಬ್ಲಿಕ್ ನೆಕ್ಸ್ಟ್ ಜೊತೆ ಮಾತನಾಡಿದ ಅವರು, ಶಿಕ್ಷಕ ಮತದಾರರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಶಿಕ್ಷಕರು ಕೂಡ ಈ ಬಾರಿ ಬದಲಾವಣೆ ಬಯಸಿ ಮತ ಹಾಕಿದ್ದಾರೆ. ನಾನೂ ಕೂಡ ನಿನ್ನೆ ನನ್ನ ಹಕ್ಕು ಚಲಾಯಿಸಿದ್ದೇನೆ. ಶಿಕ್ಷಕರ ಸೇವೆ ಮಾಡಲು ಗುರಿಕಾರ ಅವರು ಸದಾ ಸಿದ್ಧವಾಗಿದ್ದು, ಈ ಚುನಾವಣೆಯಲ್ಲಿ ಅವರು ಖಂಡಿತ ಗೆಲುವು ಸಾಧಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

Edited By :
Kshetra Samachara

Kshetra Samachara

14/06/2022 01:55 pm

Cinque Terre

41.84 K

Cinque Terre

3

ಸಂಬಂಧಿತ ಸುದ್ದಿ