ಕಲಘಟಗಿ: ಕಲಘಟಗಿ ಪಟ್ಟಣದ ಹನ್ನೆರಡು ಸಾವಿರ ಮಠದಲ್ಲಿ ಇಂದು ಬಿಜೆಪಿ ಕಾರ್ಯಕರ್ತರ ಪೂರ್ವಭಾವಿ ಸಭೆ ಮಾಡಲಾಯಿತು.
ಈಗಾಗಲೇ ಜಿಲ್ಲಾ ಪಂಚಾಯತ್, ತಾಲೂಕ ಪಂಚಾಯತ್ ಹಾಗೂ ಎಪಿಎಂಸಿ ಚುನಾವಣೆ ಸಮೀಪಿಸುತ್ತಿದ್ದಂತೆ ಕಲಘಟಗಿ ತಾಲೂಕ ಮಟ್ಟದ ಕಾರ್ಯಕರ್ತರ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ತಾಲೂಕಿನ ಬಿಜೆಪಿ ಕಾರ್ಯಕರ್ತರು ಹೆಚ್ಚಿನ ರೀತಿಯಲ್ಲಿ ಸೇರಿದ್ದು ಪಕ್ಷದ ಎಳಿಗೆಗಾಗಿ ಹಾಗೂ ಚುನಾವಣೆ ಸಿದ್ಧತೆ ಕುರಿತು ಚರ್ಚೆ ಮಾಡಲಾಯಿತು. ಈ ಸಭೆಯಲ್ಲಿ ಶಾಸಕ ಸಿ ಎಂ ನಿಂಬಣ್ಣವರ ಮಾತನಾಡಿ, ಜಿಲ್ಲಾ ಪಂಚಾಯತ್ ಹಾಗೂ ತಾಲೂಕ ಪಂಚಾಯತ್ ಚುನಾವಣೆ ಕೆಲಸವನ್ನು ಎಲ್ಲರೂ ಕೂಡಿಕೊಂಡು ಮಾಡೋಣ. ಚುನಾವಣೆಗೆ ಗೆಲ್ಲುವಂತ ಅಭ್ಯರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿ ಎಂದು ತಿಳಿಸಿದರು.
ವರದಿ: ಉದಯ ಗೌಡರ
Kshetra Samachara
14/06/2022 06:16 pm