ಹುಬ್ಬಳ್ಳಿ: ಪಶ್ಚಿಮ ಶಿಕ್ಷಕರ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.
ಹೌದು...ಬಸವರಾಜ ಹೊರಟ್ಟಿಯವರ ಅಭೂತಪೂರ್ವ ಜಯಸಾಧಿಸಿದ ಹಿನ್ನೆಲೆ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವವನ್ನು ಹುಬ್ಬಳ್ಳಿಯ ದೇಶಪಾಂಡೆ ನಗರದ ಬಿಜೆಪಿ ಕಚೇರಿ ಎದುರು ಆಚರಣೆ ಮಾಡಲಾಯಿತು. ಇನ್ನೂ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದು, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಸೇರಿ ನೂರಾರು ಕಾರ್ಯಕರ್ತರು ವಿಜಯೋತ್ಸವದಲ್ಲಿ ಭಾಗಿಯಾಗಿದ್ದರು.
Kshetra Samachara
15/06/2022 02:43 pm