ಹುಬ್ಬಳ್ಳಿ: ಮೊನ್ನೆ ಕಿಮ್ಸ್ ಕ್ವಾರ್ಟರ್ಸ್ ಕಳ್ಳತನ ಪ್ರಕರಣ ಹಿನ್ನೆಲೆಯಲ್ಲಿ ಗಲಾಟೆ ನಡೆದಿದ್ದು, ಈ ಕುರಿತು ಹುಬ್ಬಳ್ಳಿಯಲ್ಲಿ ಹಿಂದೂ ಸಂಘಟನೆಗಳ ವಿರುದ್ದ ಕಾಂಗ್ರೆಸ್ ಮುಖಂಡರು ಕಿಡಿಕಾರಿದ್ದಾರೆ. ಸಂಘ ಪರಿವಾರದವರು ವೈಯಕ್ತಿಕ ಹಿತಾಸಕ್ತಿಗೆ ಪೊಲೀಸ್ ಇಲಾಖೆ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ.
ಹುಬ್ಬಳ್ಳಿ ವಿದ್ಯಾನಗರ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಹಿಂದೂ ಕಾರ್ಯಕರ್ತನ ನಡುವೆ ಗಲಾಟೆ ನಡೆದಿತ್ತು. ಪೊಲೀಸರ ಮೇಲೆ ದಬ್ಬಾಳಿಕೆ ಮಾಡುವ ಸಂಘ ಪರಿವಾರದ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಕೈ ಮುಖಂಡರು ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಈ ಕುರಿತು ಮಾತನಾಡಿದ ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಪಾಟೀಲ್ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ, ಕೂಡಲೇ ಈ ಬಗ್ಗೆ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಮಾಜಿ ಸಿಎಂ ಶೆಟ್ಟರ್ ಹಾಗೂ ಕೇಂದ್ರ ಸಚಿವ ಜೋಶಿ ಅವರ ಒತ್ತಡದಿಂದ ಇದೆಲ್ಲ ನಡೀತಿದೆ. ಪೊಲೀಸರಿಗೆ ಸ್ವತಂತ್ರವಾಗಿ ಕೆಲಸ ಮಾಡಲು ಬಿಡಬೇಕು. ತುಂಬಾ ಜನ ಪೊಲೀಸರು ನೋವನ್ನು ತೋಡಿಕೊಂಡಿದ್ದಾರೆ. ಸಂಘ ಪರಿವಾರದವರು ಏನೇ ಇದ್ದರೂ ಕಾನೂನು ಪ್ರಕಾರವೇ ಹೋರಾಟ ಮಾಡಿ. ಪೊಲೀಸರ ಜೊತೆ ಅನುಚಿತವಾಗಿ ವರ್ತಿಸುವುದನ್ನು ಕೈ ಬಿಡಿ ಎಂದು ಆಗ್ರಹಿಸಿದ್ದಾರೆ.
Kshetra Samachara
16/06/2022 03:00 pm