ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ; ಐಟಿ ಕಚೇರಿಗೆ ಮುತ್ತಿಗೆ ಯತ್ನ, ಬಂಧನ

ಇ.ಡಿ. ದುರ್ಬಳಕೆ ಆರೋಪ ಹಾಗೂ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ತನಿಖೆ ಹೆಸರಲ್ಲಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿದ ಕಾಂಗ್ರೆಸ್ ಕಾರ್ಯಕರ್ತರು ನವನಗರದ ಐಟಿ ಕಚೇರಿ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು.

ಬೃಹತ್ rally ಮೂಲಕ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಐಟಿ ಹಾಗೂ ಇಡಿ ಇಲಾಖೆಯನ್ನು ದುರುಪಯೋಗ ಮಾಡಿಕೊಂಡು ಕಾಂಗ್ರೆಸ್ ನಾಯಕರಿಗೆ ಕಿರುಕುಳ ನೀಡುತ್ತಿದೆ ಎಂದು ಗಂಭೀರವಾಗಿ ಆರೋಪಿಸಿ ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ಆದಾಯ ತೆರಿಗೆ ಕಚೇರಿಗೆ ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದರು. ಈ ವೇಳೆ ನೂರಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಅಲ್ತಾಫ್ ಹಳ್ಳೂರ, ಗ್ರಾಮೀಣ ಘಟಕದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಪಾಟೀಲ್ ಸೇರಿ ಹಲವು ಮುಖಂಡರನ್ನು ಬಂಧಿಸಲಾಯಿತು. ಕೇಂದ್ರ ಸರ್ಕಾರ ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡಿ ಐಟಿ ಮತ್ತು ಇಡಿ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

Edited By :
Kshetra Samachara

Kshetra Samachara

17/06/2022 02:32 pm

Cinque Terre

59.82 K

Cinque Terre

22

ಸಂಬಂಧಿತ ಸುದ್ದಿ