ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಇಡಿ ಮೂಲಕ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ: ಸಿದ್ಧರಾಮಯ್ಯ ಕಿಡಿ

ಹುಬ್ಬಳ್ಳಿ: ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವರ್ಚಸ್ಸಿಗೆ ಧಕ್ಕೆ ತರಲು ಇಡಿ ಮೂಲಕ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡಿ ವಿಚಾರಣೆ ನಡೆಸುವ ಅಗತ್ಯವಿಲ್ಲ. ಸುಳ್ಳು ಮೊಕದ್ದಮೆ ಹೂಡಿ ಕಾಂಗ್ರೆಸ್ ನಾಯಕರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ ಎಂದರು.

ಅಗ್ನಿಪಥ ಯೋಜನೆ ವಿರುದ್ಧ ಯುವ ಜನಾಂಗ ಸಿಡಿದೆದ್ದಿದ್ದು, ಹಿಂದಿನ ಪದ್ಧತಿಯನ್ನೇ ಮುಂದುವರಿಸುವಂತೆ ಆಗ್ರಹಿಸುತ್ತಿದ್ದಾರೆ. ರಕ್ಷಣಾ ಇಲಾಖೆ ಸೇರಿ ಎಲ್ಲ ಇಲಾಖೆಗಳಲ್ಲಿ ಕೇಸರೀಕರಣ ಮಾಡಲು ಹೊರಟಿದ್ದಾರೆ. ಆ ಮೂಲಕ ದೇಶದಲ್ಲಿ ಅಶಾಂತಿ ಸೃಷ್ಟಿಸಲು ಹೊರಟಿದ್ದಾರೆ. ವಿವಾದ ಸೃಷ್ಟಿಸುವಲ್ಲಿ ಬಿಜೆಪಿಗರು ನಿಸ್ಸೀಮರು ಎಂದರು.

ರಾಜ್ಯದಲ್ಲಿರುವುದು ಆರ್ ಎಸ್ ಎಸ್ ಪ್ರಾಯೋಜಿತ ಸರಕಾರ. ಹೀಗಾಗಿ ಅವರು ಪೊಲೀಸ್ ಠಾಣೆಗೂ ಮುತ್ತಿಗೆ ಹಾಕಿ ಗಲಾಟೆ ಮಾಡುತ್ತಾರೆ. ಅದೇ ಕಾಂಗ್ರೆಸ್ಸಿಗರು ಮಾಡಿದರೆ ಕೇಸ್ ಹಾಕಿ ಪಕ್ಷಪಾತ ಮಾಡುತ್ತಿದ್ದಾರೆ ಎಂದರು.

Edited By : Nagesh Gaonkar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

17/06/2022 09:01 pm

Cinque Terre

42.07 K

Cinque Terre

2

ಸಂಬಂಧಿತ ಸುದ್ದಿ