ನವಲಗುಂದ: ಕೇಂದ್ರ ಬಿಜೆಪಿ ಸರ್ಕಾರ ಇ.ಡಿ ತನಿಖೆಯ ನೆಪದಲ್ಲಿ ಗಾಂಧಿ ಕುಟುಂಬದ ರಾಜಕೀಯ ವರ್ಚಸ್ಸನ್ನು ತಗ್ಗಿಸುವ ಉದ್ದೇಶದಿಂದ ರಾಜಕೀಯ ದ್ವೇಷ ಸಾಧಿಸುತ್ತಿರೋದನ್ನು ಖಂಡಿಸಿ ಪಟ್ಟಣದಲ್ಲಿ ನವಲಗುಂದ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ.20 ಸೋಮವಾರ ಬೆಳಿಗ್ಗೆ 11 ಕ್ಕೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ನವಲಗುಂದ ಬ್ಲಾಕ ಕಾಂಗ್ರೆಸ್ ಅಧ್ಯಕ್ಷ ವರ್ಧಮಾನಗೌಡ ಹಿರೇಗೌಡ್ರ ತಿಳಿಸಿದರು.
ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಟ್ಟಣದ ಲಿಂಗರಾಜ ವೃತ್ತದಿಂದ ತಹಶೀಲ್ದಾರ ಕಾರ್ಯಾಲಯದವರೆಗೆ ಬೃಹತ್ ಪಾದಯಾತ್ರೆ ಮೆರವಣೆಗೆ ನಡೆಯಲಿದೆ. ಇನ್ನು ಪ್ರತಿಭಟನೆಯಲ್ಲಿ ಮಾಜಿ ಸಚಿವ ಕೆ.ಎನ್.ಗಡ್ಡಿ, ಮಾಜಿ ಶಾಸಕ ಎನ್.ಎಚ್.ಕೋನರಡ್ಡಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿನೋದ ಅಸೂಟಿ, ಕೆ.ಪಿ.ಸಿ.ಸಿ ಸದಸ್ಯ ವಿಜಯ ಕುಲಕರ್ಣಿ, ಕೆ.ಸಿ.ಸಿ ಬ್ಯಾಂಕ ಮಾಜಿ ಅಧ್ಯಕ್ಷ ಬಾಪುಗೌಡ ಪಾಟೀಲ, ಮಾಜಿ ಜಿ.ಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ, ಚಂಬಣ್ಣ ಹಾಳಾದೋಟರ, ವಿಜಯಗೌಡ ಪಾಟೀಲ್ ಹಾಗೂ ವಿಧಾನಸಭಾ ಕ್ಷೇತ್ರದ ಎಲ್ಲ ಚುನಾಯಿತ ಪ್ರತಿನಿಧಿಗಳು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
Kshetra Samachara
19/06/2022 04:48 pm