ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: "ಪ್ರತ್ಯೇಕ ರಾಜ್ಯ ಕೇಳುವುದು ಮೂರ್ಖತನ"; ಕತ್ತಿಗೆ ಹೊರಟ್ಟಿ ತಿರುಗೇಟು

ಹುಬ್ಬಳ್ಳಿ: ಪ್ರತ್ಯೇಕ ರಾಜ್ಯ ಕೇಳುವುದು ಮೂರ್ಖತನದ ಮಾತು ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಉಮೇಶ ಕತ್ತಿಗೆ ತಿರುಗೇಟು ನೀಡಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಏಕೀಕರಣ ನಡೆದ ಹೋರಾಟವನ್ನು ಉಮೇಶ ಕತ್ತಿ ನೆನಪಿಸಿಕೊಳ್ಳಲಿ. ಕರ್ನಾಟಕ ಅಖಂಡವಾಗಿಯೇ ಉಳಿಯಬೇಕು. ಬಿಜೆಪಿಯವರು ಯಾರು ಖಂಡಿಸುತ್ತಾರೋ ಇಲ್ಲವೋ ಗೊತ್ತಿಲ್ಲ. ನಾನು ಬಿಜೆಪಿ ಪಕ್ಷದವನಾಗಿ ಹೇಳುತ್ತಿದ್ದೇನೆ... "ಉಮೇಶ್ ಕತ್ತಿ ಹೇಳಿಕೆ ಸರಿಯಲ್ಲ" ಎಂದರು.

ಏಕೀಕರಣ ಹೋರಾಟದ ಉದ್ದೇಶ ಸಹಬಾಳ್ವೆ. ಈ ಉದ್ದೇಶ ಮರೆತು ಮಾತನಾಡುವುದು ತಪ್ಪು. ಉಮೇಶ್ ಕತ್ತಿ‌ 2009ರಲ್ಲಿ ಹೀಗೆಯೇ ಹೇಳಿದ್ದ, ಆಗ ಮುಖ್ಯಮಂತ್ರಿ ತಾನೇ ಆಗುವೆ ಅಂತಲೂ ಹೇಳಿದ್ದ. ಪ್ರಾದೇಶಿಕ ಅಸಮಾನತೆ ಸರಿಪಡಿಸಲು ಕೇಳೋಣ. ಅನ್ಯಾಯ ಸರಿಪಡಿಸಲು ಕೇಳೋಣ. ಅದು ಬಿಟ್ಟು ರಾಜ್ಯ ವಿಭಜನೆ ಹೇಳಿಕೆ ಸರಿಯಲ್ಲ ಎಂದರು.

ಪಠ್ಯ ಪುಸ್ತಕ ಪೂರೈಕೆ ವಿಳಂಬ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಹೊರಟ್ಟಿ, ಪಠ್ಯ ಪರಿಷ್ಕರಣೆ ವಿಚಾರದಲ್ಲಿ ಗೊಂದಲ ಉಂಟಾಗಿ ವಿಳಂಬವಾಗಿದೆ. ಈ ಕುರಿತು ಶಿಕ್ಷಣ ಸಚಿವರ ಜೊತೆ ಮಾತನಾಡುವೆ. ಪಠ್ಯ ವಿಚಾರದಲ್ಲಿ ಸರ್ಕಾರ ದೃಢ ನಿರ್ಧಾರ ತೆಗೆದುಕೊಳ್ಳಬೇಕು. ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರ ಸಮಿತಿಗೆ ಬಿಡಬೇಕು. ಅದರಲ್ಲಿ ಸರ್ಕಾರ ಭಾಗವಹಿಸುವುದು ಸರಿಯಿಲ್ಲ. ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹಾನಿಯಾಗಬಾರದು ಎಂದು ತಿಳಿಸಿದರು.

ಇನ್ನು ರಾಜ್ಯ ಮಟ್ಟದ ಶಿಕ್ಷಕರ ಸಭೆ ಕರೆದಿದ್ದೇನೆ. ಚುನಾವಣೆಯಲ್ಲಿ ನನ್ನನ್ನು ಹೆಚ್ಚಿನ ಬಹುಮತದಿಂದ ಗೆಲ್ಲಿಸಿದ್ದಾರೆ‌. ಶಿಕ್ಷಕರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿಗಳನ್ನು ಭೇಟಿಯಾಗಲಿದ್ದೇನೆ ಎಂದರು.

Edited By : Nagesh Gaonkar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

26/06/2022 06:00 pm

Cinque Terre

95.76 K

Cinque Terre

8

ಸಂಬಂಧಿತ ಸುದ್ದಿ