ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಸರಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು; ಆತಂಕದ ವಾತಾವರಣ

ಹುಬ್ಬಳ್ಳಿ: ಮಿನಿ ವಿಧಾನ ಸೌದದಲ್ಲಿರುವ ಸರಕಾರಿ ಕಛೇರಿಗೆ ಏಕಾಏಕಿ ನುಗ್ಗಿದ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು, ಸರಕಾರಿ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ನಿಮ್ಮ ಬಗ್ಗೆ ಮಾಹಿತಿ ಕೊಡಿ, ದಾಖಲೆಗಳನ್ನು ನೀಡಿ, ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಕಿರುಕುಳ ನೀಡಿದ್ದಾರೆ. ಹೀಗಾಗಿ ಎಲ್ಲ ಸರ್ಕಾರಿ ಅಧಿಕಾರಿಗಳು ಜಮಾವಣೆಗೊಂಡು ವಿರೋಧ ವ್ಯಕ್ತಪಡಿಸಿದ್ದಾರೆ.

ಮುಂಜಾನೆಯಿಂದಲೇ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಗಂಟೆಗಟಗಟಲೇ, ಸರ್ಕಾರಿ ಸಿಬ್ಬಂದಿ ಹಾಗೂ ಅಧಿಕಾರಿಗಳ ಮಾಹಿತಿ ನೀಡಿ ಎಂದು ಕಿರುಕುಳ ನೀಡುತ್ತಿದ್ದಾರೆ ಎಂದು ನೌಕರರು ತಮ್ಮ ಕೆಲಸ ಬಿಟ್ಟು ಪಕ್ಷದ ಕಾರ್ಯಕರ್ತರ ವಿರುದ್ಧ ಗರಂ ಆಗಿದ್ದಾರೆ.

ಇನ್ನು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಆ ಸರಕಾರಿ ಕಚೇರಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಇನ್ನು ಪೊಲೀಸರಿಗೂ ಯಾವುದೇ ಮಾಹಿತಿ‌ ನೀಡದೇ ಸರಕಾರಿ ಕಚೇರಿಗೆ ನುಗ್ಗಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಸರಕಾರಿ ನೌಕರರು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Edited By : Manjunath H D
Kshetra Samachara

Kshetra Samachara

30/06/2022 03:28 pm

Cinque Terre

26.63 K

Cinque Terre

6

ಸಂಬಂಧಿತ ಸುದ್ದಿ