ಹುಬ್ಬಳ್ಳಿ: ಹುಬ್ಬಳ್ಳಿಯ ಶಿರಡಿ ನಗರದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯದಲ್ಲಿ 1.5 ಕೋಟಿ ರೂ. ವೆಚ್ಚದಲ್ಲಿ ಭೋಜನಾಲಯ ನಿರ್ಮಿಸಲಾಗಿದೆ. ಪಕ್ಕದಲ್ಲಿರುವ ಒಂದು ಎಕರೆ ಪ್ರದೇಶವನ್ನು ವಿದ್ಯಾರ್ಥಿ ನಿಲಯಕ್ಕೆ ನೀಡಲು ಶಿಫಾರಸ್ಸು ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ, ಶಾಸಕ ಜಗದೀಶ್ ಶೆಟ್ಟರ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಶಿರಡಿನಗರದ ಮೆಟ್ರಿಕ್ ನಂತರದ ವೃತ್ತಿಪರ ಬಾಲಕರ ವಿದ್ಯಾರ್ಥಿ ನಿಲಯದ ಕಟ್ಟಡದಲ್ಲಿ 1.5 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ
ನಿರ್ಮಿಸಿರುವ ಭೋಜನಾಲಯ ಉದ್ಘಾಟಿಸಿ ಅವರು ಮಾತನಾಡಿದರು.
25 ವರ್ಷದ ಹಳೆಯ ವಸತಿ ನಿಲಯ ಇದಾಗಿದೆ. 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಧ್ಯಯನ ಮಾಡಲು ಅನುಕೂಲವಾಗಲಿದೆ. ವಿದ್ಯಾರ್ಥಿಗಳು ಕಾಲೇಜಿಗೆ ತೆರಳಲು ಸಹಾಯಕವಾಗಿದೆ. ಹೆಚ್ಚಿನ ವಿದ್ಯಾರ್ಜನೆಗೆ ಉಪಯುಕ್ತವಾಗಲಿದೆ. ಹುಬ್ಬಳ್ಳಿ ಧಾರವಾಡ ಅವಳಿ ನಗರಗಳು ಶೈಕ್ಷಣಿಕವಾಗಿ ಮುಂದುವರೆದಿವೆ. ಬೇರೆ ಬೇರೆ ಜಿಲ್ಲೆಯ ವಿದ್ಯಾರ್ಥಿಗಳು ಅಧ್ಯಯನಕ್ಕಾಗಿ ಇಲ್ಲಿಗೆ ಧಾವಿಸುತ್ತಾರೆ. ಹಾಸ್ಟೇಲುಗಳ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದರು.
Kshetra Samachara
04/07/2022 08:33 pm