ಕುಂದಗೋಳ : ಜೆಡಿಎಸ್ ಪಕ್ಷದ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡರ ಕುರಿತು ಕಾಂಗ್ರೆಸ್ ಪಕ್ಷದ ನಾಯಕ ಕೆ.ಎನ್.ರಾಜಣ್ಣ "ಈಗ ಎರೆಡು ಜನ ಜೊತೆ ಹೊರಟ ದೇವೆಗೌಡರು ನಾಲ್ಕು ಜನರ ಜೊತೆ ಹೋಗುವ ದಿನ ದೂರಿಲ್ಲಾ" ಎಂಬ ಮಾತಿನ ವಿರುದ್ಧ ಕುಂದಗೋಳ ವಿಧಾನಸಭಾ ಮತಕ್ಷೇತ್ರ ಜನತಾದಳದ ವತಿಯಿಂದ ಪ್ರತಿಭಟನೆ ನಡೆಸಿದರು.
ಜೆಡಿಎಸ್ ಮುಖಂಡ ಹಜರತ್ 'ಅಲಿ ಜೋಡಮನಿಯವರ ನೇತೃತ್ವದಲ್ಲಿ ಕುಂದಗೋಳ ತಹಶೀಲ್ದಾರ ಕಚೇರಿಗೆ ಆಗಮಿಸಿದ ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ನಾಯಕ ಕೆ.ಎನ್.ರಾಜಣ್ಣ ಅವರು ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ತಮ್ಮ ಹೇಳಿಕೆ ವಿರುದ್ಧ ಕ್ಷಮೆ ಕೇಳುವಂತೆ ಒತ್ತಾಯಿಸಿದರು.
ಸಮಾಜದ ಸ್ವಾಸ್ಥ್ಯ ಕೆಡಿಸುವ ಅಪಹಾಸ್ಯ ಹೇಳಿಕೆ ನೀಡಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ಬಂಧನ ಮಾಡುವಂತೆ ಉಪತಹಶೀಲ್ದಾರ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷರ, ಬ್ಲಾಕ್ ಅಧ್ಯಕ್ಷರು, ಬೂತ್ ಅಧ್ಯಕ್ಷರು, ಸರ್ವ ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
06/07/2022 05:47 pm