ಧಾರವಾಡ: ಎಸಿಬಿ ಕಚೇರಿಗಳು ಕಲೆಕ್ಷನ್ ಸೆಂಟರ್‌ಗಳಾಗಿವೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ.ಸಂದೇಶ ಅವರು ಹೇಳಿಕೆ ಕೊಟ್ಟಿದ್ದರಿಂದ ಅವರನ್ನು ವರ್ಗಾವಣೆ ಮಾಡುವ ಬೆದರಿಕೆ ಹಾಕಲಾಗಿದೆ. ಈ ಬೆದರಿಕೆ ಹಾಕಿದವರ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ರಾಜ್ಯ ವಕೀಲರ ಪರಿಷತ್ ಸದಸ್ಯ ವಿ.ಡಿ.ಕಾಮರೆಡ್ಡಿ ಒತ್ತಾಯಿಸಿದ್ದಾರೆ.
ಧಾರವಾಡದಲ್ಲಿ ಮಾತನಾಡಿರುವ ಅವರು, ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿದವನ ಹೆಸರು ಬಹಿರಂಗವಾಗಬೇಕು. ಈ ಬಗ್ಗೆ ಆಂತರಿಕ ತನಿಖೆ ನಡೆಯಬೇಕು. ಅಲ್ಲದೇ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ನ್ಯಾಯಾಂಗ ತನಿಖೆಯಾಗಬೇಕು. ವರ್ಗಾವಣೆ ಬೆದರಿಕೆ ಹಾಕಿದವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದಿರುವ ಕಾಮರೆಡ್ಡಿ, ನ್ಯಾಯಮೂರ್ತಿ ಸಂದೇಶ ಅವರ ಹೇಳಿಕೆಗೆ ನಮ್ಮ ಬೆಂಬಲವಿದೆ ಎಂದಿದ್ದಾರೆ.
Kshetra Samachara
06/07/2022 06:56 pm