ಕುಂದಗೋಳ: ಅಭಿವೃದ್ಧಿ ಕಾರ್ಯಗಳು ನಡೆದಾಗಲೇ ಗ್ರಾಮೀಣ ಭಾಗದ ಜನರ ಜೀವನ ಸುಧಾರಿಸುತ್ತದೆ ಎಂದು ಶಾಸಕಿ ಕುಸುಮಾವತಿ ಶಿವಳ್ಳಿ ಹೇಳಿದರು.
ಅವರು ಕುಂದಗೋಳ ತಾಲೂಕಿನ ಹಿರೆನೇರ್ತಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಂಪೌಂಡ್ ನಿರ್ಮಾಣ ಕಾಮಗಾರಿ ಹಾಗೂ ನೂತನ ಭೋಜನಾಲಯ ನಿರ್ಮಾಣ ಕಾಮಗಾರಿ ಸೇರಿದಂತೆ ಎಮ್.ಜಿ.ಎನ್.ಆರ್.ಜಿ ಯೋಜನೆಯ ಕೆರೆ ಅಭಿವೃದ್ಧಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಹಿರೆನೇರ್ತಿ ಗ್ರಾಮದಲ್ಲಿ ಒಂದೇ ಕಾಲಕ್ಕೆ ಮೂರು ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿದೆ, ಈ ಕಾಮಗಾರಿಗಳನ್ನು ಅಚ್ಚುಕಟ್ಟಾಗಿ ಗ್ರಾಮಸ್ಥರು ನಿರ್ಮಾಣ ಮಾಡಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಹಿರೆನೇರ್ತಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರು ಸರ್ವ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
Kshetra Samachara
09/07/2022 09:34 am