ಹುಬ್ಬಳ್ಳಿ;ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವಿವಿಧ ವಾರ್ಡುಗಳ ವ್ಯಾಪ್ತಿಯಲ್ಲಿ ಕೈಗೊಂಡಿರುವ ಮುಖ್ಯ ರಸ್ತೆಗಳ ಅಭಿವೃದ್ಧಿ ಹಾಗೂ ಇತರ ಕಾಮಗಾರಿಗಳ ಕುರಿತು ಮಾಜಿಮುಖ್ಯಮಂತ್ರಿ, ಶಾಸಕ ಜಗದೀಶ ಶೆಟ್ಟರ್ ಅವರ ಅಧ್ಯಕ್ಷತೆಯಲ್ಲಿ ಇಂದು ಸಂಜೆ ಸರ್ಕ್ಯೂಟ್ ಹೌಸಿನಲ್ಲಿ ಪರಿಶೀಲನಾ ಸಭೆ ಜರುಗಿತು.
ರಸ್ತೆ,ಒಳಚರಂಡಿ, ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಂಜೂರಾಗಿರುವ ಅನುದಾನವನ್ನು ಲೋಕೋಪಯೋಗಿ ಇಲಾಖೆ,ಕರ್ನಾಟಕ ನಗರ ನೀರು ಸರಬರಾಜು ಮಂಡಳಿ, ಮಹಾನಗರ ಪಾಲಿಕೆ, ಹೆಸ್ಕಾಂ, ಅರಣ್ಯ ಇಲಾಖೆ ಸೇರಿದಂತೆ ಎಲ್ಲ ಸಂಬಂಧಿತ ಇಲಾಖೆಗಳು ಸಮನ್ವಯ ಸಾಧಿಸಿ, ಅಚ್ಚುಕಟ್ಟಾಗಿ ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು. ಮನೆ ಮನೆಗೆ ಅಡಿಗೆ ಅನಿಲ ಸಂಪರ್ಕದ ಕೊಳವೆ ಮಾರ್ಗ,ಕುಡಿಯುವ ನೀರು ಸರಬರಾಜು ಸೇರಿದಂತೆ ನಾಗರಿಕ ಬಳಕೆಯ ಕಾಮಗಾರಿಗಳಲ್ಲಿ ಗುಣಮಟ್ಟ,ತ್ವರಿತಗತಿ ಕಾಯ್ದುಕೊಳ್ಳಬೇಕು ಎಂದು ಸೂಚಿಸಿದರು.
Kshetra Samachara
11/07/2022 10:25 pm