ಹುಬ್ಬಳ್ಳಿ: ಸಂವಿಧಾನಿಕವಾಗಿ ಸಿಗಬೇಕಾದ ಜಾತಿ ಪ್ರಮಾಣ ಪತ್ರ ಪಡೆಯುವ ಹಿನ್ನೆಲೆಯಲ್ಲಿ, ಬೆಂಗಳೂರಿನ ಸ್ವತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಂಡಿದ್ದ ಸತ್ಯ ಪ್ರತಿಪಾದನ ಸತ್ಯಾಗ್ರಹದ ನೇತೃತ್ವ ವಹಿಸಿದ್ದ, ಬೇಡ ಜಂಗಮದ ಸಮಾಜದ ಒಕ್ಕೂಟದ ಅಧ್ಯಕ್ಷ ಬಿ.ಡಿ ಹಿರೇಮಠ ಹಾಗೂ ಹಲವಾರು ಮಠಾಧೀಶರನ್ನು ಪೊಲೀಸರು ಬಂಧಿಸಿದ್ದು ಖಂಡನೀಯ ಎಂದು ಹುಬ್ಬಳ್ಳಿ ತಾಲೂಕು ಬೇಡ ಜಂಗಮ ಸಮಾಜದ ವತಿಯಿಂದ ಹುಬ್ಬಳ್ಳಿ ತಹಶಿಲ್ದಾರ ಕಛೇರಿ ಮುಂದೆ ಪ್ರತಿಭಟನೆ ಮಾಡಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಈ ಸತ್ಯ ಪ್ರತಿಪಾದನ ಹೋರಾಟವನ್ನು ಗೌರವಿಸಿ ಸಂವಿಧಾನದ ಪ್ರಕಾರ ಬೇಡ ಜಂಗಮರ ಪ್ರಮಾಣಪತ್ರವನ್ನು ನ್ಯಾಯಯುತವಾಗಿ ನೀಡಬೇಕೆಂದು ಒತ್ತಾಯಿಸಿ ತಹಶೀಲ್ದಾರರ ಮೂಲಕ ರಾಜ್ಯ ಸರಕಾರಕ್ಕೆ ಒತ್ತಾಯಿಸಿದರು.
Kshetra Samachara
13/07/2022 02:27 pm