ಹುಬ್ಬಳ್ಳಿ: ಮಹಿಳೆಯೊಬ್ಬರು ಮನೆ ಕುಸಿದು ಗಾಯಗೊಂಡಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಹಾಲಪ್ಪ ಆಚಾರ ಭೇಟಿ ಆರೋಗ್ಯ ವಿಚಾರಿಸಿದ್ದಾರೆ.
ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಸಚಿವರು, ಸಂತ್ರಸ್ತ ಮಹಿಳೆಗೆ ಧೈರ್ಯ ತುಂಬಿದ್ದಾರೆ. ಕುಂದಗೋಳ ತಾಲ್ಲೂಕು ಯಲಿವಾಳ ಗ್ರಾಮದ ಕಾಶವ್ವ (62) ಮನೆ ಬಿದ್ದು ಗಾಯಗೊಂಡಿದ್ದು,ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಳಿಕ ವೈದ್ಯರ ಜೊತೆಗೆ ಸಮಾಲೋಚನೆ ನಡೆಸಿದ ಸಚಿವರು, ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದ್ದಾರೆ.
Kshetra Samachara
13/07/2022 03:32 pm