ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಉಸ್ತುವಾರಿ ಸಚಿವರ ಜೊತೆಗೆ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರ ವಾಗ್ವಾದ

ಹುಬ್ಬಳ್ಳಿ: ಸುಮಾರು ಒಂದು ವಾರಗಳ ಕಾಲ ಸತತವಾಗಿ ಸುರಿದ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ತಡವಾಗಿ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವರ ನಡೆಗೆ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಅಸಮಾಧಾನ ಹೊರಹಾಕಿದ್ದಾರೆ.

ಹೌದು. ಇಂದು ಧಾರವಾಡ ಜಿಲ್ಲೆಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಕೆಲವು ಸ್ಥಳಗಳಿಗೆ ಭೇಟಿ ನೀಡಿ ಮಳೆ ಹಾನಿ ಸಮೀಕ್ಷೆ ನಡೆಸಿದ್ದಾರೆ. ಬಳಿಕ ಸರ್ಕ್ಯೂಟ್ ಹೌಸ್‌ನಲ್ಲಿ ಅಧಿಕಾರಿಗಳ ಸಭೆ ನಡೆಸುತ್ತಿದ್ದ ವೇಳೆಯಲ್ಲಿ ಪ್ರವಾಸಿ ಮಂದಿರದ ಆವರಣದಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಇದೇ ಸಮಯಕ್ಕೆ ಅಹವಾಲು ಸ್ವೀಕರಿಸಲು ಆಗಮಿಸಿದ ಸಚಿವರ ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ.

ಧಾರವಾಡ ಜಿಲ್ಲೆಯಾದ್ಯಂತ ಸಾಕಷ್ಟು ಸಮಸ್ಯೆಗಳಿದ್ರೂ ಜಿಲ್ಲೆಯತ್ತ ಗಮನ ಹರಿಸುತ್ತಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದು, ಅಕಾಲಿಕ ಮಳೆಯಿಂದಾಗಿ ನೂರಾರು ಮನೆಗಳು ನೆಲ ಕಚ್ಚಿದರೂ ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಡಜನರ ಸಂಕಷ್ಟಕ್ಕೆ ಸರಿಯಾಗಿ ಸ್ಪಂದನೆ ನೀಡುತ್ತಿಲ್ಲ ಎಂದು ಸಚಿವರ ಜೊತೆ ವಾಗ್ವಾದ ನಡೆಯಿತು.

Edited By :
Kshetra Samachara

Kshetra Samachara

13/07/2022 06:00 pm

Cinque Terre

96.13 K

Cinque Terre

5

ಸಂಬಂಧಿತ ಸುದ್ದಿ