ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಶ್ ಶೆಟ್ಟರ್: ಅಭ್ಯರ್ಥಿ ಸ್ಥಾನದಲ್ಲಿ ಮಾಜಿ ಸಿಎಂ ಶೆಟ್ಟರ್ ಮುಂಚೂಣಿ...?

ಬೆಂಗಳೂರು/ಹುಬ್ಬಳ್ಳಿ : ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಹೆಸರು ಮಾಡಿರುವ ಹಿರಿಯ ರಾಜಕಾರಣಿ ಜಗದೀಶ್ ಶೆಟ್ಟರ್ ಅವರು ಈಗ ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡುವ ಕಾಲ ಸನ್ನಿಹಿತವಾಗಿದ್ದು, ಈಗ ಉಪರಾಷ್ಟ್ರಪತಿ ಸ್ಥಾನಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೆಸರು ಕೇಳಿ ಬರುತ್ತಿದೆ.

ಹೌದು.. ರಾಷ್ಟ್ರಪತಿ ಚುನಾವಣೆ ಬೆನ್ನಲ್ಲೇ ಉಪರಾಷ್ಟ್ರಪತಿ ಚುನಾವಣೆ (Vice President Election 2022) ಕೂಡ ಘೋಷಣೆಯಾಗಿತ್ತು. ಈ ಸ್ಥಾನಕ್ಕೆ ಕರ್ನಾಟದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ( Farmer CM Jagadeesh Shetter ) ಅವರ ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ. ಈ ಮೂಲಕ ಉಪ ರಾಷ್ಟ್ರಪತಿ ಅಭ್ಯರ್ಥಿ ಸ್ಥಾನಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಎನ್ನಲಾಗುತ್ತಿದೆ. ಹಾಗಾದ್ರೆ ಅವರಿಗೆ ಅದೃಷ್ಟ ಒಲಿಯುತ್ತಾ ಎಂಬುದು ತೀವ್ರ ಕುತೂಹಲ ಕೆರಳಿಸಿದೆ.

ಈ ನಡುವೆ ದೆಹಲಿಯಲ್ಲಿ ಬಿಜೆಪಿಯ ಸಂಸದೀಯ ಮಂಡಳಿ ಸಭೆಯನ್ನು ಸಂಜೆ 6 ಗಂಟೆಗೆ ನಿಗದಿ ಪಡಿಸಲಾಗಿದೆ. ಈ ಸಭೆಯಲ್ಲಿ 2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ದೃಷ್ಠಿಯಿಂದ ಉಪ ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಾಗಿ ಕರ್ನಾಟಕದಿಂದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಚರ್ಚೆ ಬಿಜೆಪಿ ಪಾಳಯದಲ್ಲಿ ನಡೆದಿದೆ ಎನ್ನಲಾಗಿದೆ.

ರಾಜ್ಯದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಹೆಸರು ಉಪ ರಾಷ್ಟ್ರಪತಿ ಅಭ್ಯರ್ಥಿಯ ಪಟ್ಟಿಯಲ್ಲಿ ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ. ಇವರೊಂದಿಗೆ ಮುಖ್ತಾರ್ ಅಬ್ಬಾಸ್ ಖಾನ, ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ಹೆಸರುಗಳು ಕೇಳಿ ಬರುತ್ತಿದೆ. ಆದರೆ ಮುಂಚೂಣಿ ರೇಸ್ ನಲ್ಲಿ ಜಗದೀಶ್ ಶೆಟ್ಟರ್ ಹೆಸರಿದ್ದು, ಅವರು ಉಪ ರಾಷ್ಟ್ರಪತಿ ಹುದ್ದೆಗೆ ಏರಲಿದ್ದಾರಾ ಎಂಬುದು ಕುತೂಹಲ ಹೆಚ್ಚಿಸಿದೆ.

Edited By : Nirmala Aralikatti
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

16/07/2022 06:52 pm

Cinque Terre

47.34 K

Cinque Terre

45

ಸಂಬಂಧಿತ ಸುದ್ದಿ