ಧಾರವಾಡ: ಹಾಲು, ಮೊಸರು, ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಇಂದು ಧಾರವಾಡದಲ್ಲಿ ಪ್ರತಿಭಟನೆ ನಡೆಸಿದೆ.
ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಬೆಲೆ ಏರಿಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಜಿಎಸ್‌ಟಿ ಹೆಸರಿನಲ್ಲಿ ಕೇಂದ್ರ ಸರ್ಕಾರ ಹಾಲು, ಮೊಸರಿನಲ್ಲೂ ದುಡ್ಡು ಹೊಡೆಯುವ ಕೆಲಸ ಮಾಡುತ್ತಿದೆ. ಗ್ಯಾಸ್ ಸಿಲಿಂಡರ್ ಬೆಲೆ ಗಗನಕ್ಕೇರಿದೆ. ಬಡವರು ಈ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬದುಕುವುದೇ ದುಸ್ಥರವಾಗಿದೆ. ಬೆಲೆ ಏರಿಕೆಗೆ ಕಡಿವಾಣ ಹಾಕುತ್ತೇನೆ ಎಂದು ಅಧಿಕಾರದ ಗದ್ದುಗೆ ಏರಿದ ನರೇಂದ್ರ ಮೋದಿ ಅವರು, ಬೆಲೆ ಏರಿಕೆ ನಿಯಂತ್ರಣ ಮಾಡದೇ ಬಡವರ ರಕ್ತ ಹೀರುವ ಕೆಲಸ ಮಾಡುತ್ತಿದ್ದಾರೆ.
ಇದೇ ರೀತಿ ಕೇಂದ್ರ ಸರ್ಕಾರ ಜಿಎಸ್‌ಟಿ ಹೆಸರಿನಲ್ಲಿ ಬಡವರ ಹೊಟ್ಟೆ ಮೇಲೆ ಹೊಡೆಯುವ ಕೆಲಸ ಮಾಡುತ್ತ ಹೊರಟರೆ ದೇಶದ ಜನ ಬರುವ ದಿನಗಳಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ. ನರೇಂದ್ರ ಮೋದಿ ಅವರು ಕೂಡಲೇ ಅಗತ್ಯ ವಸ್ತುಗಳ ಮೇಲೆ ಹೇರಿರುವ ಜಿಎಸ್‌ಟಿಯನ್ನು ತೆಗೆದು ಹಾಕಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದರು.
Kshetra Samachara
19/07/2022 02:14 pm