ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಷ್ಟ್ರೀಯ ಧ್ವಜ ತಯಾರಿಕಾ ಘಟಕಕ್ಕೆ ಮಹಮ್ಮದ್ ನಲ್ಪಾಡ್ ಭೇಟಿ: ಸಮಸ್ಯೆ ಆಲಿಸಿದ ಕೈ ನಾಯಕ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಬೆಂಗೇರಿ ಖಾದಿ ಗ್ರಾಮೋದ್ಯೋಗ ಹಾಗೂ ಧ್ವಜ ತಯಾರಿಕಾ ಘಟಕಕ್ಕೆ ಕಾಂಗ್ರೆಸ್ ಯುವ ಘಟಕದ ರಾಜ್ಯಾಧ್ಯಕ್ಷ ಮಹಮ್ಮದ್ ನಲ್ಪಾಡ್ ಭೇಟಿ ನೀಡಿ ಕಾರ್ಮಿಕರ ಸಮಸ್ಯೆಗಳ ಆಲಿಸಿದರು.

ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಪ್ರತಿಯೊಂದು ಮನೆಯ ಮೇಲೆ ರಾಷ್ಟ್ರೀಯ ಧ್ವಜ ಹಾರಿಸುವ ಸದುದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪಾಲಿಸ್ಟರ್ ಧ್ವಜಗಳಿಗೆ ಅನುಮತಿ ನೀಡಿರುವುದರ ಬಗ್ಗೆ ಕಾರ್ಮಿಕರು ಕಾಂಗ್ರೆಸ್ ಮುಖಂಡ ಮಹಮ್ಮದ್ ನಲ್ಪಾಡ್ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಈಗಾಗಲೇ ಸಾಕಷ್ಟು ಸಮಸ್ಯೆಗಳನ್ನು ಅನುಭವಿಸಿದ್ದೇವೆ ಹೀಗಿದ್ದರೂ ಕೂಡ ಸರ್ಕಾರ ಮತ್ತಷ್ಟು ಸಮಸ್ಯೆಗಳನ್ನು ತಂದೊಡ್ಡುತ್ತಿದೆ ಎಂದು ಖಾದಿ ಗ್ರಾಮೋದ್ಯೋಗದ ಹಾಗೂ ಧ್ವಜ ತಯಾರಿಕೆ ಕಾರ್ಮಿಕರು ತಮ್ಮ ನೋವಿನ ಸಂಗತಿಗಳನ್ನು ಬಿಚ್ಚಿಟ್ಟರು.

Edited By : Shivu K
Kshetra Samachara

Kshetra Samachara

19/07/2022 02:47 pm

Cinque Terre

12.28 K

Cinque Terre

2

ಸಂಬಂಧಿತ ಸುದ್ದಿ