ನವಲಗುಂದ : ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ನವಲಗುಂದ ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಹಾಗೂ ಇತರ ವಿಚಾರಗಳನ್ನು ಕುರಿತು ಸಮಾಲೋಚನೆ ನಡೆಸಿದರು.
ಇದೆ ವೇಳೆ ನವಲಗುಂದ ಬಿಜೆಪಿ ಕಚೇರಿಯಲ್ಲಿ ಜನಸಂಪರ್ಕ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ವಿವಿಧ ಗ್ರಾಮಗಳ ಸಾರ್ವಜನಿಕರು ಕಚೇರಿಗೆ ಭೇಟಿ ನೀಡಿ, ತಮ್ಮ ಮನವಿ ಹಾಗೂ ಬೇಡಿಕೆಗಳನ್ನು ಸಲ್ಲಿಸಿದರು. ಸಾರ್ವಜನಿಕರ ಸಮಸ್ಯೆಗಳನ್ನು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದು, ಶೀಘ್ರವಾಗಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು.
Kshetra Samachara
20/07/2022 09:30 am