ನವಲಗುಂದ: 2023 ವಿಧಾನಸಭಾ ಚುನಾವಣೆಗೆ ಈಗಾಗಲೇ ಟಿಕೆಟ್‌ಗಾಗಿ ಜಿದ್ದಾಜಿದ್ದಿನ ಪೈಪೋಟಿ ಆರಂಭವಾಗಿದೆ. ನವಲಗುಂದ ವಿಧಾನಸಭಾ ಮತ ಕ್ಷೇತ್ರದಲ್ಲಿ ಈಗ ಎಲ್ಲರನ್ನು ಕಾಡುತ್ತಿರುವ ಪ್ರಶ್ನೆ ಅಂದ್ರೆ, ಅದು ಈ ಬಾರಿ ಕಾಂಗ್ರೆಸ್ ಟಿಕೆಟ್ ಯಾರ ಪಾಲಾಗಲಿದೆ ಎಂಬುದು. ಈಗಾಗಲೇ ಕಾಂಗ್ರೆಸ್‌ಗೆ ಜೆಡಿಎಸ್‌ನ ಮಾಜಿ ಶಾಸಕ ಎನ್.ಹೆಚ್ ಕೋನರಡ್ಡಿ ಸಹ ಎಂಟ್ರಿ ಕೊಟ್ಟಿದ್ದಾರೆ.
ಆದರೆ ಇದರಿಂದ ನವಲಗುಂದದಲ್ಲಿ ಸಾಕಷ್ಟು ಮೂಲ ಕಾಂಗ್ರೆಸಿಗರಲ್ಲಿ ಅಸಮಾಧಾನ ಸೃಷ್ಟಿಯಾಗಿತ್ತು. ಮಂಗಳವಾರ ಧಾರವಾಡಕ್ಕೆ ಆಗಮಿಸಿದ ಕರ್ನಾಟಕ ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮದ್ ನಲಪಾಡ್ ಅಸೂಟಿ ಪರ ಬ್ಯಾಟ್ ಬೀಸಿದ್ದಾರೆ. ಅವರು ಹೇಳಿದ್ದನ್ನೊಮ್ಮೆ ಕೇಳಿ...
ಈ ಮಾತಿನಿಂದ ಜಿಲ್ಲಾ ಗ್ರಾಮೀಣ ಯೂತ್ ಕಾಂಗ್ರೆಸ್ ಅಧ್ಯಕ್ಷ ವಿನೋದ ಅಸೂಟಿ ಅವರ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಈ ಬೆಳವಣಿಗೆಯಿಂದ ಮುಂಬರುವ ವಿಧಾನ ಸಭಾ ಕ್ಷೇತ್ರದ ಚುನಾವಣೆಗೆ ನವಲಗುಂದ ಕ್ಷೇತ್ರದಿಂದ ಟಿಕೆಟ್ ಯಾರಿಗೆ ಸಿಗಲಿದೆ ಎಂಬ ಕುತೂಹಲ ಸಾರ್ವಜನಿಕರಲ್ಲಿ ಹೆಚ್ಚಾಗಿದೆ. ಕಳೆದ ಬಾರಿ ವಿನೋದ ಅಸೂಟಿ ಅವರಿಗೆ ಟಿಕೆಟ್ ಸಿಕ್ಕಿತ್ತು. ಈ ಹಿಂದೆ ಕೆ ಎನ್ ಗಡ್ಡಿ ಅವರು ಸಹ ಸಚಿವರಾಗಿ ಇದ್ದವರು.
ವಿನೋದ ಇಚ್ಚಂಗಿ, ಪಬ್ಲಿಕ್ ನೆಕ್ಸ್ಟ್ ನವಲಗುಂದ
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
20/07/2022 04:33 pm